ಅಕ್ರಮ ದನಗಳ ಸಾಗಣೆ ಲಾರಿ ಪಲ್ಟಿ : 8 ದನಗಳ ಮಾರಣಹೋಮ

0
48

ಚಿತ್ರದುರ್ಗ:

       ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಬಳಿ ನಡೆದಿದೆ.

       ಪೂರ್ತಿ ಮುಚ್ಚಿರುವ ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ದನಗಳ ಆಕ್ರಂದನ ಕೇಳಿ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದು, 22 ದನಗಳನ್ನು ರಕ್ಷಿಸಿದ್ದಾರೆ. ಗ್ರಾಮಸ್ಥರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

LEAVE A REPLY

Please enter your comment!
Please enter your name here