ಅಕ್ರಮ ಬ್ಯಾನರ್ : ಬಿಬಿಎಂಪಿಗೆ ಹೈಕೋರ್ಟ್ ಕ್ಲಾಸ್

0
28

ಬೆಂಗಳೂರು:

Related image

      ನಗರದಲ್ಲಿ ಅಕ್ರಮವಾಗಿ ಹಾಕಿರುವ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಖಡಕ್ ನಿರ್ದೇಶನ ನೀಡಿದೆ.

      ಮಾಹಿತಿ ಹಕ್ಕು ಕಾರ್ಯಕರ್ತ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು.

      ಕಲಾಪ ಆರಂಭವಾಗುತ್ತಿದ್ದಂತೆಯೇ ದಿನೇಶ್ ಮಾಹೇಶ್ವರಿ ಅವರು ಸ್ವಯಂ ಪ್ರೇರಿತವಾಗಿ ಬಿಬಿಎಂಪಿ ವಕೀಲರಿಗೆ ಈ ಕುರಿತಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಾಹೀರಾತು ನೀತಿಗೆ ಸಂಬಂಧಿಸಿದಂತೆ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ವಿಚಾರಣೆಗೆ ಬಂದ ಮತ್ತೊಂದು ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತೊಮ್ಮೆ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

LEAVE A REPLY

Please enter your comment!
Please enter your name here