ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ ನೀಡಬಾರದು : ವಾಟಾಳ್ ನಾಗರಾಜ್

0
29

ಬೆಂಗಳೂರು,

ಯಾವುದೇ ಕಾರಣಕ್ಕೂ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ ನೀಡಬಾರದು ಎಂದು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂರನ್ನು ಭೇಟಿಯಾಗಿ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಸಡಿಲಿಕೆ ಮಾಡ ಕೂಡದು. ಕೇಂದ್ರ ಬುದ್ಧಿವಂತಿಕೆಯಿಂದ ಸೇತುವೆ ನಿರ್ಮಿಸಿ ಅರಣ್ಯಪ್ರದೇಶದಲ್ಲಿ ರಾತ್ರಿ ಸಮಯ ವಾಹನ ಸಂಚಾರಕ್ಕೆ ಅನುವು ಮಾಡಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಅನುವು ಮಾಡಿ ಕೊಡಬಾರದು ಎಂದು ಸಿಎಂರಲ್ಲಿ ಒತ್ತಾಯ ಮಾಡಿದ್ದೇವೆ ಎಂದು ತಿಳಿಸಿದರು.

ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿದರೆ ತೀವ್ರ ಹೋರಾಟ ಮಾಡುತ್ತೇವೆ. ಇದರ ಹಿಂದೆ ಮರದ ಮಾಫಿಯಾ ಇದೆ. ಕೇರಳದ ಮರದ ಲೂಟಿಕೋರರು ವಾಹನ ಸಂಚಾರ ನಿಷೇಧ ಸಡಿಲಿಕೆ ಹುನ್ನಾರದ ಹಿಂದೆ ಇದ್ದಾರೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here