ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಟ್ರ್ಯಾಕ್ಟರ್

0
25

ಗುಬ್ಬಿ:

      ತಾಲ್ಲೂಕಿನ ಕಡೇಪಾಳ್ಯ ಗ್ರಾಮದ ರೈತ ಶ್ರೀನಿವಾಸ್ ಎಂಬುವವರ ತೋಟದಲ್ಲಿದ್ದ ಶೆಡ್‍ಗೆ ಆಕಸ್ಮಿಕ ಬೆಂಕಿ ಬಿದ್ದು ಶೆಡ್‍ನಲ್ಲಿದ್ದ ಟ್ರ್ಯಾಕ್ಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಳೆದ ರಾತ್ರಿ ಸಂಭವಿಸಿದೆ.

      ಕಳೆದ ರಾತ್ರಿ ಆಕಸ್ಮಿಕ ಬೆಂಕಿಯಿಂದ ಶೆಡ್‍ನಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ತೋಟದ ಅಕ್ಕಪಕ್ಕದ ಮನೆಯವರು ಕಂಡು ತಕ್ಷಣ ಅಗ್ನಿಶಾಮಕ ದಳದವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು ತಕ್ಷಣ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರೂ ಕೂಡ ಶೆಡ್‍ನಲ್ಲಿದ್ದ ಟ್ರ್ಯಾಕ್ಟರ್, ಸುಮಾರು 5 ಸಾವಿರದಷ್ಟು ಕೊಬ್ಬರಿ, ಕೇಬಲ್ ಹಾಗೂ ಹುಲ್ಲಿನ ಬಣವೆ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಜೀಪಿನ ಟೈಯರ್‍ಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಇದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ರೈತ ಶ್ರೀನಿವಾಸ್ ತಿಳಿಸಿದ್ದಾರೆ.

      ಆಕಸ್ಮಿಕ ಬೆಂಕಿಯಿಂದ ಸಾಕಷ್ಟು ನಷ್ಟವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮ ಪಂಚಾಯ್ತಿ ಸದಸ್ಯ ಸೋಮಶೇಖರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here