ಆಪರೇಷನ್ ಕಮಲ ಕಾರ್ಯಾಚರಣೆಗೆ ಮನವಿ

0
21

ಬೆಂಗಳೂರು:

Related image

      ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಸಲು ಅನುಮತಿ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

      ನಗರದಲ್ಲಿ ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಿರ್ಧಾರಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಯಡಿಯೂರಪ್ಪ ಹೈಕಮಾಂಡ್‍ಗೆ ರವಾನಿಸಿದ್ದಾರೆ. ಆಪರೇಷನ್ ಕಮಲ ಸದ್ಯದ ಪರಿಸ್ಥಿತಿಯಲ್ಲಿ ನಮಗೆ ರಿಸ್ಕ್ ಆಗಿ ಪರಿಣಮಿಸಿದ್ದು, ಹೈಕಮಾಂಡ್ ಸಾಥ್ ನೀಡಿದರೆ ಆಪರೇಷನ್ ಕಮಲ ಮಾಡಲು ಮುಂದಾಗುತ್ತೇವೆ ಎಂದು ವರದಿಯಲ್ಲಿ ಸೂಚ್ಯವಾಗಿ ತಿಳಿಸಿದ್ದಾರೆ.

      ಈ ಮೂಲಕ ಲೋಕಸಭೆ ಚುನಾವಣೆಗೆ ಬೇರೆ ಪಕ್ಷಗಳ ನಾಯಕರಿಗೆ ಗಾಳ ಹಾಕಲು ವೇದಿಕೆ ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವುದು ನಮ್ಮ ಜವಾಬ್ದಾರಿ. ಈಗ ನಮ್ಮ ಪಕ್ಷದ ಪರಿಸ್ಥಿತಿ ಅತ್ಯಂತ ಉತ್ತಮವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನವಿರೋಧಿ ಹೇಳಿಕೆಗಳು, ಉತ್ತರ ಕರ್ನಾಟಕದ ಜನರ ಬಗ್ಗೆ ಅವರು ನೀಡಿರುವ ಹೇಳಿಕೆ ಜನಾಕ್ರೋಶಕ್ಕೆ ಕಾರಣವಾಗಿದೆ. ಅದನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

      ಆಪರೇಷನ್ ಕಮಲದ ಬಗ್ಗೆ ಯಾವುದೇ ನಿರ್ಧಾರವನ್ನು ಸದ್ಯಕ್ಕೆ ತೆಗೆದುಕೊಳ್ಳುವುದಿಲ್ಲ. ಮೂರು ತಿಂಗಳು ಮೌನವಾಗಿದ್ದು, ಸರ್ಕಾರದ ಆಡಳಿತ ವೈಖರಿಯನ್ನು ಗಮನಿಸುತ್ತೇವೆ. ಸರ್ಕಾರ ಇದೇ ರೀತಿ ಮುಂದುವರಿದರೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದು ಹೈಕಮಾಂಡ್ ಗಮನಕ್ಕೆ ತರಲಾಗಿದೆ.

LEAVE A REPLY

Please enter your comment!
Please enter your name here