ಆ.12ರಂದು ವಸತಿಯುತ ಸಿಬಿಎಸ್‍ಸಿ ಶಾಲೆಗೆ ಅಡಿಗಲ್ಲು

0
24

ದಾವಣಗೆರೆ:  ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಈಶ್ವರಪ್ಪ ಭಾಗಿ

      ಶ್ರೀಬೀರೇಶ್ವರ ವಿದ್ಯಾವರ್ಧಕ ಸಂಘ, ಜಿಲ್ಲಾ ಕುರುಬರ ಸಂಘ, ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ, ಎಲ್ಲಾ ತಾಲೂಕು ಕುರುಬರ ಸಂಘಗಳ ಘಟಕಗಳು ಹಾಗೂ ಯುವ ಘಟಕಗಳ ಸಂಯುಕ್ತಾಶ್ರದಲ್ಲಿ ಆಗಸ್ಟ್ 12ರಂದು ನಗರದಲ್ಲಿ ವಸತಿಯುತ ಸಿಬಿಎಸ್‍ಸಿ ಶಾಲೆಯ ಕಟ್ಟಡದ ಅಡಿಗಲ್ಲು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಚಿವರು, ಶಾಸಕರುಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.

      ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಹಿರಿಯ ಮುಖಂಡ ಕೆಂಗೋ ಹನುಮಂತಪ್ಪ, ಅಂದು ಬೆಳಿಗ್ಗೆ 7 ಗಂಟೆಗೆ ನಗರದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಲುದ್ದೇಶಿಸಿರುವ ವಸತಿಯುತ ಸಿಬಿಎಸ್‍ಸಿ ಶಾಲೆಯ ಕಟ್ಟಡದ ಅಡಿಗಲ್ಲು ಸಮಾರಂಭ ನಡೆಯಲಿದ್ದು, ಬಳಿಕ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ನೂತನ ಸಚಿವರು ಹಾಗೂ ಶಾಸಕರುಗಳಿಗೆ ಸನ್ಮಾನ ಸಮಾರಂಭ ಜರುಗಲಿದೆ ಎಂದು ಹೇಳಿದರು.

      ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಆರ್.ಶಂಕರ್, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ಎ.ರವೀಂದ್ರನಾಥ್, ಮಾಜಿ ಸಚಿವರುಗಳಾದ ಹೆಚ್.ವಿಶ್ವನಾಥ್, ಹೆಚ್.ಎಂ.ರೇವಣ್ಣ, ಡಾ.ವೈ.ನಾಗಪ್ಪ, ಸತೀಶ್ ಜಾರಕಿಹೊಳಿ, ಹೆಚ್.ಆಂಜನೇಯ, ಪಿ.ಟಿ.ಪರಮೇಶ್ವರ ನಾಯ್ಕ ಮತ್ತಿತರರು ಭಾಗವಹಿಸಲಿದ್ದು, ಮಾಜಿ ಶಾಸಕ, ಸಮಾಜದ ಹಿರಿಯ ಮುಖಂಡ ಕೆ.ಮಲ್ಲಪ್ಪ ಅಧ್ಯಕ್ಷತೆ ವಹಿಸಿಕೊಳ್ಳಲಿದಾರೆ ಎಂದು ಮಾಹಿತಿ ನೀಡಿದರು.

      ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಮಾಜಕ್ಕೆ ಪ್ರಪ್ರಥಮ ಬಾರಿಗೆ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಹಕಾರದಿಂದ 25 ರೂಪಾಯಿಗೆ ಚದರ ಅಡಿಯಂತೆ 44 ಸಾವಿರ ಚದರ ಅಡಿ ಜಾಗ ಕೊಡಿಸಿದ್ದರು. ಆದರೆ, ಈ ಜಾಗ ಸಾಕಾಗುವುದಿಲ್ಲ. ಆದ್ದರಿಂದ ಇನ್ನಷ್ಟು ಜಾಗವನ್ನು ಸಮಾಜಕ್ಕೆ ಕೊಡಬೇಕೆಂದು ನಗರಾಭಿವೃದ್ಧಿ ಸಚಿವರಿಗೆ ಹಾಗೂ ವಸತಿಯುತ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ ಕೊಡಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ವಿವರಿಸಿದರು.

      ಸುದ್ದಿಗೋಷ್ಠಿಯಲ್ಲಿ ಸಮಾಜದ ಹಿರಿಯ ಮುಖಂಡರುಗಳಾದ ಕೆ.ಮಲ್ಲಪ್ಪ, ಬಿ.ಹೆಚ್.ಪರಶುರಾಮಪ್ಪ, ಜೆ.ಕೆ.ಕೊಟ್ರಬಸಪ್ಪ, ಬಳ್ಳಾರಿ ಷಣ್ಮುಖಪ್ಪ, ಮುದಹದಡಿ ದಿಳ್ಯಪ್ಪ, ಹೆಚ್.ಬಿ.ಗೋಣೆಪ್ಪ, ಬಿ.ಎಂ.ಸತೀಶ್, ಮಂಜುನಾಥ್, ಹಾಲೇಕಲ್ಲು ಎಸ್.ಟಿ.ಅರವಿಂದ್, ಕೆ.ಪರಶುರಾಮಪ್ಪ, ಪ್ರಕಾಶ್, ಅಜ್ಜಪ್ಪ, ರುದ್ರಪ್ಪ, ಅಡಾಣಿ ಸಿದ್ದಪ್ಪ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here