ಇಂದು ಬಿಜೆಪಿ ತಾಲ್ಲೂಕು ಮಟ್ಟದ ಕಾರ್ಯಕರ್ತರ ಸಮಾಲೋಚನ ಸಭೆ

0
18

    ಚಳ್ಳಕೆರೆ

ಭಾರತೀಯ ಜನತಾ ಪಕ್ಷದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾಲೋಚನ ಸಮಾವೇಶವನ್ನು ಜುಲೈ 30ರ ಸೋಮವಾರ ಬೆಳಗ್ಗೆ 11ಕ್ಕೆ ನಗರದ ಯಾದವರ ಹಾಸ್ಟಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ಅವರು, ವಿಧಾನಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಪುನಃ ಪಕ್ಷವನ್ನು ಸಂಘಟಿಸುವ ಕಾರ್ಯಕ್ಕೆ ಚಾಲನೆ ನೀಡಬೇಕಿದೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿ ರಾಜ್ಯ ಸಹ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಘಟನೆ ಕುರಿತಂತೆ ಚರ್ಚೆ ನಡೆಸಲಿದ್ದಾರೆಂದರು.

   ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕರೀಕೆರೆ ತಿಪ್ಪೇಸ್ವಾಮಿ ಮಾಹಿತಿ ನೀಡಿ, ಈಗಾಗಲೇ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರಿಗೆ ಸಭೆಯ ಮಾಹಿತಿ ನೀಡಲಾಗಿದೆ. ಚುನಾವಣೆ ಸೋಲಿನ ನಂತರ ಕಾರ್ಯಕರ್ತರಲ್ಲಿ ನಿರಾಶೆ ಭಾವನೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ದುರೀಣರು ಇಲ್ಲಿಗೆ ಆಗಮಿಸಿ ಎಲ್ಲರಿಂದಲೂ ಮಾಹಿತಿ ಪಡೆದು ಮುಂದಿನ ಕಾರ್ಯಯೋಜನೆಯ ಬಗ್ಗೆ ಮಾರ್ಗದರ್ಶನ ಮಾಡಲಿದ್ಧಾರೆಂದರು.

LEAVE A REPLY

Please enter your comment!
Please enter your name here