ಉತ್ತಮ ಸೇವಾ ಕಾರ್ಯನಿರ್ವಹಣೆ:ಬಳ್ಳಾರಿ ರೆಡ್ ಕ್ರಾಸ್ ಸಂಸ್ಥೆಗೆ ಪ್ರಶಸ್ತಿ

0
12

ಬಳ್ಳಾರಿ:

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಳ್ಳಾರಿ ಘಟಕವು 2016-17ನೇ ಸಾಲಿನಲ್ಲಿ ತೋರಿದ ಉತ್ತಮ ಕಾರ್ಯನಿರ್ವಹಣೆಗೆ ಮನ್ನಣೆ ದೊರಕಿದ್ದು, ಬಳ್ಳಾರಿ ರೆಡ್ ಕ್ರಾಸ್ ಸಂಸ್ಥೆಯ ಘಟಕಕ್ಕೆ ಉತ್ತಮ ಕಾರ್ಯನಿರ್ವಹಣೆ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ರಾಜಭವನದಲ್ಲಿರುವ ಬಾಂಕ್ವೆಟ್ ಹಾಲ್‍ನಲ್ಲಿ ಮೇ 22ರಂದು ಬೆಳಗ್ಗೆ 11ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಬಳ್ಳಾರಿ ರೆಡ್‍ಕ್ರಾಸ್ ಸಂಸ್ಥೆಯ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳು ಆಗಿರುವ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಮಾನ್ಯ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2016-17ನೇ ಸಾಲಿನಲ್ಲಿ ಬಳ್ಳಾರಿ ರೆಡ್‍ಕ್ರಾಸ್ ಸಂಸ್ಥೆ ತಂಡ ತೋರಿದ ಅದ್ಭುತ ಸೇವಾ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಅಶೋಕಕುಮಾರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here