ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿ : ಸಿಎಂ ಭರವಸೆ

0
37

ಬೆಂಗಳೂರು:

      ನನಗೆ ಒಂದು ವರ್ಷ ಸಮಯ ಕೊಡಿ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಅಭಿವೃದ್ಧಿಗೊಳಿಸುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

      ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ, ಸಿಇಒಗಳ ಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬುದನ್ನು ಪ್ರಸ್ತಾಪಿಸಿ,  ಏನೇ ಸಮಸ್ಯೆಯಿದ್ದರೂ ಉತ್ತರ ಕರ್ನಾಟಕದ ಭಾಗದವರು ನನ್ನನ್ನು ನೇರವಾಗಿ ಭೇಟಿಯಾಗಬಹುದು ಎಂದರು.

      ಸುವರ್ಣಸೌಧ ಪ್ರತಿದಿನ ಚಟುವಟಿಕೆಯಿಂದಿರಲು ಏನು ಮಾಡಬೇಕು ಅನ್ನೋ ಬಗ್ಗೆ ಬ್ಲೂ ಪ್ರಿಂಟ್ ರೆಡಿಯಾಗಿದೆ. ಸುವರ್ಣಸೌಧಕ್ಕೆ ಯಾವ ಇಲಾಖೆಯ ಅಧಿಕಾರಿಗಳನ್ನು ಬೆಂಗಳೂರಿನಿಂದ ಕಳುಹಿಸಬೇಕು ಎಂಬ ಬಗ್ಗೆಯೂ ತೀರ್ಮಾನವಾಗಿದೆ ಎಂದಿದ್ದಾರೆ.

      ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನನ್ನದೇ ಆದ ಕನಸುಗಳಿವೆ,  ಈ ಭಾಗದ ಪ್ರತಿ ಜಿಲ್ಲೆಗಳಲ್ಲಿಯೂ ಎರಡು ದಿನ ಕಳೆಯುವ ಮೂಲಕ ಸ್ವತಃ ನಾನೆ ಜನರ ಸಮಸ್ಯೆ ಆಲಿಸುತ್ತೇನೆ. ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here