ಉತ್ತರ ಭಾರತ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

0
38

ನವದೆಹಲಿ:

ಮುಂದಿನ 48 ಗಂಟೆಗಳಲ್ಲಿ ಪರ್ವತ ರಾಜ್ಯಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯ ಪರಿಣಾಮ ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದಾದ್ಯಂತ ಮಳೆಯಾಗಲಿದೆ. ಉತ್ತರಾಖಂಡ್, ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಬಿದ್ದರೆ, ರಾಜಸ್ತಾನದಲ್ಲಿ ಧೂಳು ಬಿರುಗಾಳಿ ಕಾಣಿಸಿಕೊಳ್ಳಲಿದೆ.

ಪಶ್ಚಿಮ ಭಾಗದಲ್ಲಿ ಗುಡುಗು ಮಿಂಚಿನ ವಾತಾವರಣದಿಂದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುಡುಗು ಮಿಂಚಿನೊಂದಿಗೆ ಗಂಟೆಗೆ 50ರಿಂದ 70 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತೀವ್ರ ಬಿರುಗಾಳಿ ದಕ್ಷಿಣ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ, ತೆಲಂಗಾಣ, ಉತ್ತರ ಕರಾವಳಿ ಆಂಧ್ರ ಪ್ರದೇಶ, ಲಕ್ಷದ್ವೀಪ, ಬಿಹಾರ, ಚತ್ತೀಸ್ ಗಢ, ವಿದರ್ಭ, ದೆಹಲಿ, ಪಂಜಾಬ್, ಹರ್ಯಾಣ ಮೊದಲಾದ ಪ್ರದೇಶಗಳಲ್ಲಿ ತೀವ್ರ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here