ಎತ್ತಿನಹೊಳೆ ಕಾಮಗಾರಿ : ಸ್ಥಳಕ್ಕೆ ಶಾಸಕರ ಭೇಟಿ

0
35

ತುಮಕೂರು:

     ತುಮಕೂರು ಗ್ರಾಮಾಂತರ ವ್ಯಾಪ್ತಿಯ ಚನ್ನೇನಹಳ್ಳಿ ಬಳಿ ಹಾದು ಹೋಗಿರುವ ಎತ್ತಿನಹೊಳೆ ಯೋಜನೆ ಕಾಮಗಾರಿಯ ಸ್ಥಳಕ್ಕೆ ಶಾಸಕ ಡಿ.ಸಿ.ಗೌರಿಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

      ಎತ್ತಿನಹೊಳೆ ಯೋಜನೆ ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ರೈತರ ಜಮೀನಿಗೆ ಸೂಕ್ತ ಪರಿಹಾರ ವಿತರಿಸದೆ ಕಾಮಗಾರಿಯನ್ನು ನಡೆಸುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರು ಎತ್ತಿನಹೊಳೆ ಯೋಜನೆ ಕಾಮಗಾರಿಯ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಪರಿಹಾರ ವಿತರಣೆಯಾಗುವವರೆಗೂ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಖಡಕ್ ಸಂದೇಶ ರವಾನಿಸಿದರು.

      ಸಕಲೇಶಪುರದಿಂದ ಕೋಲಾರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಚಾಲ್ತಿಯಲ್ಲಿದ್ದು, ಸದರಿ ಯೋಜನೆಯ ಮಾರ್ಗವು ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ಕಾರಣ ಗ್ರಾಮಾಂತರ ಭಾಗದ ಕೆರೆಗಳಿಗೂ ನೀರು ಹರಿಸುವಂತೆ ಸರ್ಕಾರಕ್ಕೆ ಒತ್ತಡ ಹೇರುವುದಾಗಿ ತಿಳಿಸಿದರು.
ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಧಿಕಾರಿಗಳು ರೈತರಿಗೆ ಯಾವುದೇ ನೋಟೀಸ್ ನೀಡದೆ ಭೂ ಸ್ವಾಧೀನಪಡಿಸಿಕೊಂಡು ಕಾಮಗಾರಿ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಶಾಸಕರಿಗೆ ದೂರು ನೀಡಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ಈ ವೇಳೆ ಜೆಡಿಎಸ್ ಉಪಾಧ್ಯಕ್ಷ ಹಾಲನೂರು ಅನಂತ್ ಕುಮಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್, ಮುಖಂಡರಾದ ವಿ.ಎನ್.ಮೂರ್ತಿ, ಕೆಂಪನರಸಯ್ಯ, ಭೈರೇಗೌಡ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here