ಐಪಿಎಲ್ ಇತಿಹಾಸದಲ್ಲೇ ಭಾರತದ ಪರ ದಾಖಲೆ ಬರೆದ ರಿಷಬ್ ಪಂತ್

0
12

ನವದೆಹಲಿ:

ಭಾರತದ ಉದಯೋನ್ಮುಖ ಕ್ರಿಕೆಟಿಗ ರಿಷಬ್ ಪಂತ್ ಐಪಿಎಲ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದ್ದು, ಭಾರತದ ಪರ ಐಪಿಎಲ್ ಪಂದ್ಯವೊಂದರಲ್ಲಿ ಆತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲೇ ರಿಷಬ್ ಪಂತ್ ಇನ್ನಿಂಗ್ಸ್ ವೊಂದರಲ್ಲಿ ಗರಿಷ್ಟ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಐಪಿಎಲ್ ನ 50 ನೇ ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ. ಅಲ್ಲದೆ ಪಂತ್ ಐಪಿಎಲ್ ನಲ್ಲಿ ಶತಕ ಗಳಿಸಿದ 31ನೇ ಆಟಗಾರ ಹಾಗೂ ಭಾರತದ 13ನೇ ಆಟಗಾರ ಎನಿಸಿಕೊಂಡರು. ಅಂತೆಯೇ ಹಾಲಿ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಮತ್ತು ಐಪಿಎಲ್ ನಲ್ಲಿ ಆತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೂ ರಿಷಬ್ ಪಾತ್ರರಾದರು.

ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ ರಿಷಬ್ ಪಂತ್ 15 ಬೌಂಡರಿ, 7 ಭರ್ಜರಿ ಸಿಕ್ಸರ್ ನ್ನೊಳಗೊಂಡಂತೆ ಕೇವಲ 63 ಎಸೆತಗಳಲ್ಲಿ 128 ರನ್ ಸಿಡಿಸಿ ಅಜೇಯರಾಗಿ ಉಳಿದರು. ಪ್ರಮುಖವಾಗಿ ಇನ್ನಿಂಗ್ಸ್ ನ ಅಂತಿಮ ಓವರ್ ನಲ್ಲಿ ಪಂತ್ ಬರೊಬ್ಬರಿ 26 ರನ್ ಸಿಡಿಸಿದರು. ರಿಷಬ್ ಶತಕದ ಹೊರತಾಗಿಯೂ ಹೈದರಾಬಾದ್ ತಂಡ ಈ ಪಂದ್ಯದಲ್ಲಿ ಗೆಲುವು ಪಡೆಯಿತು.

LEAVE A REPLY

Please enter your comment!
Please enter your name here