ಐಪಿಎಲ್ ಬೆಟ್ಟಿಂಗ್ ಹಗರಣ: ನಟ, ನಿರ್ಮಾಪಕ ಅರ್ಬಾಜ್ ಖಾನ್ ಗೆ ಸಮನ್ಸ್ ಜಾರಿ

0
17

ಮುಂಬೈ:

   ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹೋದರ, ನಟ, ನಿರ್ಮಾಪಕ ಅರ್ಬಾಜ್ ಖಾನ್ ಗೆ ಠಾಣೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಅರ್ಬಾಜ್ ಖಾನ್ ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿದ್ದು, ದೊಡ್ಡ ಮೊತ್ತದ ಬೆಟ್ಟಿಂಗ್ ನಡೆಸಿರುವ ಬಗ್ಗೆ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. 

      ಸ್ಪಾಟ್ ಪಿಕ್ಸಿಂಗ್ ಹಗರಣದಲ್ಲಿ ದೆಹಲಿ ಪೊಲೀಸರು ಶ್ರೀಶಾಂತ್, ಅಜಿತ್ ಚಾಂಡಿಲಾ, ಮತ್ತು ಅಂಕಿತ್ ಚೌಹ್ಹಾಣ್ ಅವರನ್ನು ಬಂಧಿಸಿದ ನಂತರ ಐಪಿಲ್ ಸ್ಪಾಟ್ ಪಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು.
      2013ರಲ್ಲಿ ಈ ಮೂವರು ಆಟಗಾರರು ರಾಜಸ್ತಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದರು.
ಮತ್ತೊಂದು ಪ್ರಕರಣದಲ್ಲಿ ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇರೆಗೆ ಮುಂಬೈ ಪೊಲೀಸರು ವಿಂದು ದಾರಾಸಿಂಗ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುನಾಥ್ ಮೆಯ್ಯಪ್ಪನ್ ಅವರನ್ನು ಬಂಧಿಸಿದ್ದರು.

LEAVE A REPLY

Please enter your comment!
Please enter your name here