ಒಕ್ಕಲಿಗ ಸಂಘದ ಅಧ್ಯಕ್ಷ ಸ್ಥಾನ : ಅಧಿಕಾರದಿಂದ ಕೆಳಗಿಳಿದ ಬೆಟ್ಟೇಗೌಡ

0
47

ಬೆಂಗಳೂರು:

Image result for d n bettegowda

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಿ.ಎನ್. ಬೆಟ್ಟೇಗೌಡ ಅವರನ್ನು ಪದಚ್ಯುತಗೊಳಿಸಲಾಗಿದೆ. ಈ ಮೂಲಕ ಬೆಟ್ಟೇಗೌಡ ಅವರ ಒಂದುವರೆ ವರ್ಷದ ಆಡಳಿತ ಅಂತ್ಯವಾಗಿದೆ.

 

ಇಂದು ಒಕ್ಕಲಿಗರ ಸಂಘದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಅಗಸ್ಟ್ 7 ನೇ ತಾರೀಖಿನಂದು ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ.
ಜುಲೈ 18 ರಂದು ಸಂಘದ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. 7 ದಿನಗಳ ಒಳಗಾಗಿ ವಿಶ್ವಾಸ ಮತ ಸಾಬೀತು ಪಡಿಸಬೇಕಾಗಿತ್ತು. ಆದರೆ ಬೆಟ್ಟೇಗೌಡ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಟ್ಟೇಗೌಡ ಅವರನ್ನು ಪದಚ್ಯುತಗೊಳಿಸಲಾಗಿದೆ ಎಂದು ನಿರ್ದೇಶಕ ಶಿವಲಿಂಗಯ್ಯ ತಿಳಿಸಿದ್ದಾರೆ. ಸಭೆಯಲ್ಲಿ ಹಂಗಾಮಿ ಕಾರ್ಯದರ್ಶಿಯಾಗಿ ನಾರಾಯಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here