ಒಗ್ಗೂಡಿ ಕೆಲಸ ಮಾಡಿ : ಶಾಸಕ ಕರೆ

0
9

ತುರುವೇಕೆರೆ:

ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲು ಪಕ್ಷ ಬೇಧ ಮರೆತು ಒಗ್ಗೂಡಿ ಕೆಲಸ ಮಾಡುವಂತೆ ಶಾಸಕ ಮಸಾಲಾ ಜಯರಾಂ ಕರೆ ನೀಡಿದರು.

      ತಾಲ್ಲೂಕಿನ ಭೂವನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಠಿಯಿಂದ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತಾಲ್ಲೋಕಿನ ಅನೇಕ ಕqಗಳಲ್ಲಿ ಸಾರ್ವಜನಿಕರ ಸೇವೆಗೆ ಒದಗಿಸಲಾಗುತ್ತಿದೆ. ಕೇವಲ ನಗರ ಪ್ರದೇಶದಲ್ಲಿ ಮಾತ್ರ ಶುದ್ದ ನೀರನ್ನು ಉಪಯೋಗಿಸುತ್ತಿದ್ದು, ಗ್ರಾಮೀಣ ಪ್ರದೇಶದವರೂ ಸಹ ಇದರ ಪ್ರಯೋಜನ ಪಡೆದು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸುವಂತೆ ಮಾಡುವ ಉದ್ದೇಶದಿಂದ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತೆರೆಯುತ್ತಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.


      ಇದೇ ಸಂದರ್ಭದಲ್ಲಿ ಮಾತನಾಡಿ ಕ್ಷೇತ್ರವನ್ನು ಅಭಿವೃದ್ದಿ ಪಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಕ್ಷೇತ್ರಕ್ಕೆ ತಂದು ತಾಲ್ಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಹಲವಾರು ಯೋಜನಾ ಕಾಮಗಾರಿಗಳನ್ನು ಶೀಘ್ರದಲ್ಲೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.

      ಈ ಸಂಧರ್ಭದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ಧೇಶಕ ಬಿ.ಎಸ್.ದೇವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಒಕ್ಕಲಿಗರ ಸಂಘದ ತಾ|| ಅಧ್ಯಕ್ಷ ಕಡೇಹಳ್ಳಿ ಸಿದ್ದೇಗೌಡ, ಕೆಂಪರಾಜು, ಕಾಂತರಾಜು ಇಂಜಿನಿಯರ್‍ಗಳಾದ ಕೃಷ್ಣಕಾಂತ್, ರಮೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here