ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಖಂಡ್ರೆ ಶಾಕ್

0
16

ಬೀದರ್:

      ಬಿಜೆಪಿಯ ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಅವರು ಶಾಕ್ ನೀಡಿದ್ದಾರೆ.


      ಬೀದರ್ ನಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಸೇರಲು ಮುಂದಾಗಿರುವ ಬಿಜೆಪಿಯ ಶಾಸಕರು ಸಂಪರ್ಕದಲ್ಲಿದ್ದಾರೆ. ಹಲವರಲ್ಲಿ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿದ್ದೇವೆ. ಎಂದ ಅವರು, ಉತ್ತರಕರ್ನಾಟಕ ಇಬ್ಬಾಗಕ್ಕೆ ಆಸ್ಪದ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಒತ್ತು ನೀಡಲಾಗುವುದು. ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರು ಈ ಭಾಗದ ಬಗ್ಗೆ ಅಧ್ಯಯನ ಮಾಡಿಲ್ಲ. ಯಾರೋ ಹೇಳಿದ್ದನ್ನು ಕೇಳಿ ಮಾತನಾಡುತ್ತಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here