ಕುಂದಾನಗರಿಗೆ ಮಾನ್ಯ ರಾಷ್ಟ್ರಪತಿಗಳ ಆಗಮನ

0
23

ಬೆಳಗಾವಿ: 

              ಮಾನ್ಯ ರಾಷ್ತ್ರಪತಿ ರಾಮನಾಥ್ ಕೋವಿಂದ್ ಬೆಳಗಾವಿಗೆ ಆಗಮಿಸಿದರು. ರಾಷ್ಟ್ರಪತಿ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಾಯಿತು.

             ಕೆ.ಎಲ್​.ಇ ಕಾನೂನು ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲು ರಾಷ್ಟ್ರಪತಿ ಬೆಳಗಾವಿ ಗೆ ಆಗಮಿಸಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ  ರಾಷ್ಟ್ರಪತಿಯನ್ನು ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಸಂಸದ ಸುರೇಶ ಅಂಗಡಿ, ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ, ಐಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ, ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

               ಮಾನ್ಯ ರಾಷ್ಟ್ರಪತಿಗಳು ವಿಮಾನ ನಿಲ್ದಾಣದಿಂದ ನೇರವಾಗಿ ಖಾಸಗಿ ಕಾಲೇಜಿನ ಕಾರ್ಯಕ್ರಮದ ವೇದಿಕೆಗೆ ತೆರಳಿದರು. ನಂತರ ಆಗಮಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here