ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವೆ : ದೇವೆಗೌಡ

0
6

ಗುಬ್ಬಿ

       ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಮೈತ್ರಿ ಪಕ್ಷದ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ತಿಳಿಸಿದರು.

        ತಾಲ್ಲೂಕಿನ ಸಿ.ಎಸ್.ಪುರದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೇಮಾವತಿ ನೀರನ್ನು ಕೆರೆಗಳಿಗೆ ಸಮರ್ಪಕವಾಗಿ ಹರಿಸುವುದರ ಜೊತೆಗೆ ಕುಡಿಯುವ ನೀರಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚಿಂತನೆ ನಡೆಸಿದ್ದು, ಕ್ಷೇತ್ರದ ಮತದಾರರು ಅತ್ಯಧಿಕ ಮತಗಳನ್ನು ನೀಡುವ ಮೂಲಕ ಪೂರ್ಣ ಪ್ರಮಾಣದ ಸಹಕಾರ ಮಾಡಿದರೆ ನೀರಿನ ವಿಚಾರದಲ್ಲಿ ಆ ಜಾತಿ ಈ ಜಾತಿ ಎನ್ನದೆ ಸಮರ್ಪಕವಾಗಿ ನೀರು ಹರಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

       ಜಿಲ್ಲೆಯ ಅಭಿವೃದ್ಧಿಯ ಜೊತೆಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ರೈತರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಕ್ಷೇತ್ರದ ಮತದಾರರು ಸಂಪೂರ್ಣವಾದ ಸಹಕಾರ ನೀಡುವ ಮೂಲಕ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸಹಕರಿಸುವಂತೆ ಮನವಿ ಮಾಡಿದರು.

       ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಈಗಾಗಲೆ ಕ್ಷೇತ್ರದಾದ್ಯಂತ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಚಾರಕಾರ್ಯದಲ್ಲಿ ತೊಡಗಿದ್ದು ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಅವಿರತ ಹೋರಾಟ ಮಾಡುತ್ತಿರುವುದಾಗಿ ತಿಳಿಸಿದ ಅವರು, ಕ್ಷೇತ್ರದ ಮತದಾರರು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

       ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಗೆಲುವಿಗೆ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಈ ಬಾರಿ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವುದಾಗಿ ತಿಳಿಸಿದರು.

      ಕಾಂಗ್ರೆಸ್ ಮುಖಂಡರಾದ ಗೀತಾರಾಜಣ್ಣ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಗೆಲುವಿಗೆ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಅವಿರತ ಹೋರಾಟ ಮಾಡುತ್ತಿದ್ದು, ಪ್ರಸಕ್ತ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ಕ್ಷೇತ್ರದ ಮತದಾರರು ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು.

      ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಮಾತನಾಡಿ, ನೀರಾವರಿ ಹಾಗೂ ರೈತರ ಪರವಾದ ನಾಯಕರು ಎಂದರೆ ಅದು ದೇವೆಗೌಡರು ಮಾತ್ರ. ನಮ್ಮ ಜಿಲ್ಲೆಗೆ ಅಂತಹ ಧೀಮಂತ ನಾಯಕರು ಬಂದಿರುವುದು ನಮ್ಮ ಪುಣ್ಯವಾಗಿದೆ. ಈ ಬಾರಿ ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿರುವುದು ಒಂದು ದೊಡ್ಡ ಶಕ್ತಿಯಾಗಿದೆ. ದೇವೆಗೌಡರು ಜಿಲ್ಲೆಯಲ್ಲಿ ಮುಂದಿನ ದಿನದಲ್ಲಿ ಹೆಚ್ಚು ಹೆಚ್ಚು ನೀರಾವರಿ ಯೋಜನೆ ಮಾಡುವ ಕೆಲಸವನ್ನು ಮಾಡಲಿದ್ದು ಪ್ರತಿಯೊಬ್ಬ ಮುಖಂಡರುಗಳು ನಾಯಕರುಗಳು ಹಾಗೂ ಕಾರ್ಯಕರ್ತರು ಮತದಾರರ ಮನವೊಲಿಸಿ ಮತ ಹಾಕಿಸುವಂತೆ ತಿಳಿಸಿದರು.ತಾಲ್ಲೂಕಿನ ಮಣಿಕುಪ್ಪೆ, ಮಾವಿನಹಳ್ಳಿ, ಸಿ.ಎಸ್.ಪುರ, ಹಿಂಡಿಸಿಗೆರೆ, ಕಲ್ಲೂರು, ಕಡಬ, ನಿಟ್ಟೂರು, ಗುಬ್ಬಿಯಲ್ಲಿ ಮತ ಪ್ರಚಾರ ರ್ಯಾಲಿ ನಡೆಸಿದರು. ರ್ಯಾಲಿಯಲ್ಲಿ ರಾಜಣ್ಣ, ನಂಜೇಗೌಡ, ಕುಮಾರ್, ಹೊನ್ನಗಿರಿಗೌಡ, ವೈ.ಯೋಗಾನಂದ್, ಕೆ.ಸಿ.ಕೃಷ್ಣಮೂರ್ತಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here