ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣು

0
16

ಬೆಂಗಳೂರು

    ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯದ ರಂಗನಾಥಪುರದ ನಾಗರತ್ನ (38)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಮಲ್ಲೇಶ್ ಎಂಬುವರನ್ನು ವಿವಾಹವಾಗಿದ್ದ ನಾಗರತ್ನಗೆ ಇಬ್ಬರು ಮಕ್ಕಳಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ನಾಗರತ್ನ ಭಾನುವಾರ ಮಧ್ಯಾಹ್ನ 4ರ ವೇಳೆ ಮನೆಯವರೆಲ್ಲ ಹೊರಗಡೆ ಹೋಗಿದ್ದಾಗ ಶಾಲೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯದ ಪೋಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಉದ್ಯಮಿ ನೇಣು
ಕೆಆರ್ ಪುರಂನ ಅಶೋಕ್ ನಗರದ ಪ್ರಕಾಶ್ ತುಮಾರ್ ಎನ್ನುವ ಮಹಿಳೆ ಭಾನುವಾರ ರಾತ್ರಿ ನೇಣಿಗೆ ಶರಣಾಗಿದ್ದು, ಕಾರಣ ತಿಳಿದು ಬಂದಿಲ್ಲ. ಅಶೋಕ್ ನಗರದ 16ನೇ ಮುಖ್ಯರಸ್ತೆ, ಮನೆಯಲ್ಲಿ ಸುಮಾರ್ (28) ರಾತ್ರಿ 8.40ರ ವೇಳೆ ನೇಣಿಗೆ ಶರಣಾಗಿದ್ದಾರೆ.
ಸಣ್ಣ ಉದ್ಯಮ ನಡೆಸುತ್ತಿದ್ದ ಅವರು ಹಲವು ವರ್ಷಗಳಿಂದ ಅಶೋಕ್ ನಗರದಲ್ಲಿ ವಾಸಿಸುತ್ತಿದ್ದರು. ಕೆ.ಆರ್. ಪುರಂ ಪೋಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here