ಖಾಸಗಿ ವೈದ್ಯರಿಂದ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ವಿರೋಧ

0
28

ಹಗರಿಬೊಮ್ಮನಹಳ್ಳಿ:

      ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಭಾರತೀಯ ವೈದ್ಯಕೀಯ ಸಂಘದ ತಾಲೂಕು ಪದಾಧಿಕಾರಿಗಳು ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ವಿರೋಧಿಸಿ ತಹಸೀಲ್ದಾರ ಕೆ.ವಿಜಯಕುಮಾರ ಮನವಿ ಸಲ್ಲಿಸಿದರು.

      ಈ ವೇಳೆ ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ.ಎ.ಎಂ.ಎ.ಕರಿಬಸಯ್ಯ ಮಾತನಾಡಿ, ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ರಾಜ್ಯಾದ್ಯಾಂತ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ತಾಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ನೀಡಿದ್ದಾರೆ. ಖಾಸಗಿ ವೈದ್ಯರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲವಾದರೇ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

 ಹೊರರೋಗಿಗಳಿಗೆ ಯಾವುದೇ ತೊಂದರೆ ಇಲ್ಲ :

ವೈದ್ಯಕೀಯ ಸಂಘ ಕರೆ ನೀಡಿದ್ದ ಒಪಿಡಿ ಬಂದ್‍ಗೆ ಪಟ್ಟಣದಲ್ಲಿನ ಖಾಸಗಿ ವೈದ್ಯರು ಯಾವುದೇ ಪ್ರತಿಕ್ರಿಯೆ ನೀಡದೇ ಎಂದಿನಂತೆ ತಮ್ಮ ಕಾರ್ಯ ಚಟುವಟಿಕೆ ನಡೆಸಿದರು. ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿ ಎಂದಿನಂತೆ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ತಪಾಸಣೆ, ತುರ್ತು ಸೇವೆ ಸೇರಿದಂತೆ ಒಳರೋಗಿಗಳ ಚಿಕಿತ್ಸೆ ನೀಡುವಲ್ಲಿ ನಿರತರಾಗಿದ್ದು ಕಂಡುಬಂತು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮುಂಜಾಗೃತಾ ಕ್ರಮವಾಗಿ ಚಿಕಿತ್ಸೆಗೆ ಏರ್ಪಾಡು ಮಾಡಲಾಗಿತ್ತು.

      ಈ ವೇಳೆ ಸಂಘದ ಉಪಾಧ್ಯಕ್ಷ ಡಾ.ಬಿ.ಎಂ.ಡಿ.ಬಸವರಾಜ, ಹಿರಿಯ ವೈದ್ಯ ಡಾ.ಬಸವರಾಜ ರೆಡ್ಡಿ, ಡಾ.ಟಿ.ಬಸವರೆಡ್ಡಿ, ಡಾ.ಬಂಡ್ರಿ ವಿಶ್ವನಾಥ, ಡಾ.ವಿನಯ ಸಿಂಹ, ಡಾ.ವೇದಮೂರ್ತಿ, ಡಾ.ವಿನಯ್, ಡಾ.ಸುರೇಶ್ ಪಟ್ಟೇದ್ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here