ಜನರಲ್ಲಿ ಗೊಂದಲ ಬೇಡ, ಕೊಟ್ಟ ಭರವಸೆಯನ್ನು ಈಡೇರಿಸುತ್ತೇನೆ

0
11

ಬಳ್ಳಾರಿ:

      ನಗರದ ಅಭಿವೃಧ್ಧಿಗೆ ಅವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ. ಶುದ್ಧ ಕುಡಿವ ನೀರು ಸರಬರಾಜು ವಿಷಯಕ್ಕೆ ಸಂಬಂಧಿಸಿದಂತೆ ಜನರಲ್ಲಿ ಗೊಂದಲ ಬೇಡ, ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ನಡೆದುಕೊಳ್ಳುವೆ ಎಂದು ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಭರವಸೆ ನೀಡಿದರು.

      ನಗರದ 5ನೇ ವಾರ್ಡ್‍ನ ಬಲ್ಲರಪ್ಪ ಕಾಲೋನಿಗೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಆಲಿಸಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದರು. ನಗರದ ನಾಗರಿಕರಿಗೆ ಶುದ್ಧ ಕುಡಿವ ನೀರು ಸರಬರಾಜು ಆಗಬೇಕು, ಸ್ವಲ್ಪ ತೊಂದರೆಯಾದರೂ ಸುಮ್ಮನಿರೋಲ್ಲ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿರುವೆ. ಕೆಲ ಕಡೆ ನಾನಾ ಕಾರಣಗಳಿಂದ ನೀರಿನ ಸಮಸ್ಯೆ ಇರಬಹುದು, ಕೂಡಲೇ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಸರಿಪಡಿಸುವೆ ಎಂದು ಭರವಸೆ ನೀಡಿದರು.

      ಬಲ್ಲರಪ್ಪ ಕಾಲೋನಿ ಸೇರಿದಂತೆ ನಗರದ ನಾನಾ ಬಡಾವಣೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಶುದ್ಧ ಕುಡಿವ ನೀರಿನ ಅರವಟ್ಟಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, 4ದಿನಗಳಲ್ಲಿಯೇ ನಾಗರಿಕರಿಗೆ ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವೆ. ನಗರದ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಕೂಡದು, ಕಂಡು ಬಂದಲ್ಲಿ ಕೂಡಲೇ ಕ್ರಮಕ್ಕೆ ಶಿಫಾರಸ್ಸು ಮಾಡುವೆ ಎಂದು ಈಗಾಗಲೇ ಅಧಿಕಾರಿಗಳಿಗೆ ಎಚ್ಚರಿಸಿರುವೆ. ಯಾವ ಬಡಾವಣೆಗೆ ತೆರಳಿದರೂ ಅಧಿಕಾರಿಗಳೊಂದಿಗೆ ತೆರಳುತ್ತಿರುವೆ, ಸಣ್ಣ ಪುಟ್ಟ ಸಮಸ್ಯೆಗಳಿದ್ದರೇ ಸ್ಥಳದಲ್ಲಿಯೇ ಸರಿಪಡಿಸುತ್ತಿರುವೆ. ನಗರದ ನಾಗರಿಕರ ನಿರೀಕ್ಷೆಯಂತೆ ಅವಧಿ ಪೂರ್ತಿ ಪ್ರಾಮಾಣಿಕವಾಗಿ ಶ್ರಮಿಸುವೆ. ನಗರದ ಅಭಿವೃಧ್ಧಿ ಬಗ್ಗೆ ಯಾವುದೇ ಕಾರಣಕ್ಕೂ ಯಾರೋಂದಿಗೂ ಮುಲಾಜಿಗೇ ಬೀಳೋಲ್ಲ. ನಗರ ಹಾಗೂ ಜಿಲ್ಲೆಯ ಸಮಗ್ರ ಅಭಿವೃಧ್ಧಿಗೆ ಮೊದಲ ಆದ್ಯತೆ ನೀಡುವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಷಾಷಾಬ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇತರರು, ವಿವಿಧ ಗಣ್ಯರು ಇದ್ದರು.
 

LEAVE A REPLY

Please enter your comment!
Please enter your name here