ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ

0
24

ಬಳ್ಳಾರಿ:

          ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವರಾಜ್ ಹೆಡೆ ಅವರು ಚಾಲನೆ ನೀಡಿದರು.
              ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛತಾ ಅಭಿಯಾನ ಸರ್ಕಾರದ ಆದೇಶದ ಮೇರೆಗೆ ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲು ಎಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಯವರಿಗೆ ಸೂಚಿಸಿದರು. ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹಾಗೂ ಆಸ್ಪತ್ರೆಯ ಒಳಗಡೆ ಹಾಗೂ ಹೊರಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ.ಬಸರೆಡ್ಡಿ ಅವರು ಮಾತನಾಡಿದರು.
ಜಿಲ್ಲಾ ಸಲಹೆಗಾರರಾದ ಡಾ.ಲಕ್ಷ್ಮಿಕಾಂತ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾಯಕಲ್ಪದ ಅಡಿಯಲ್ಲಿ ರಾಜ್ಯ ಸರ್ಕಾರದ ಆದೇಶ ಮೇರೆಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಸ್ವಚ್ಛತೆ ಕುರಿತು ಕಡ್ಡಾಯ ಪ್ರತಿಜ್ಞಾವಿಧಿಯನ್ನು ಡಿಎಚ್‍ಒ ಡಾ.ಶಿವರಾಜ ಹೆಡೆ ಬೋಧಿಸಿದರು.
            ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಶೇಖರ ರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಿಜಾಮುದ್ದೀನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಓಂ ಪ್ರಕಾಶ್ ಕಟ್ಟಿಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೃಷ್ಣ ನಾಯ್ಕ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಸ್ವಚ್ಛತೆಯ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here