ಜುಲೈ 2 : ಬೆಂ.ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳ ಆರಂಭ

0
33

ಬೆಂಗಳೂರು:

  ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳಲ್ಲಿ ಜು.2ರ ಸೋಮವಾರದಿಂದ ತರಗತಿಗಳು ಆರಂಭವಾಗಲಿದೆ.

      ಅನೇಕ ಕಾರಣಗಳಿಂದಾಗಿ ಎರಡು ಬಾರಿ ಈ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಾರಂಭದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಜು.2ರಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ಅಧಿಸೂಚನೆ ಹೊರಡಿಸಿದೆ.

       ಬೆಂಗಳೂರು ಕೇಂದ್ರ ವಿದ್ಯಾಲಯವು ಈ ಸಂಬಂಧ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ ಇದರಿಂದ ವಿದ್ಯಾರ್ಥಿಗಳು ಅಧ್ಯಾಪಕರಲ್ಲಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಾಫೆಟ್‌, ತಮ್ಮ ವಿಶ್ವವಿದ್ಯಾಲಯಕ್ಕೆ ಸೇರಿದ ಪದವಿ ಕಾಲೇಜುಗಳ ತರಗತಿಗಳನ್ನು ಜು.2ರಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. 

       ಬೆಂಗಳೂರು ವಿಶ್ವವಿದ್ಯಾಲಯ ತ್ರಿಭಜನೆಗೊಂಡ ನಂತರ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ 2018-19ನೇ ಸಾಲಿನಿಂದ ಬಿ.ಎ, ಬಿಎಸ್‌ ಸಿ, ಬಿ.ಕಾಂ, ಬಿಬಿಎಂ, ಬಿಸಿಎ, ಬಿಎಚ್‌ಎಂ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ನ ತರಗತಿಗಳು ಆರಂಭವಾಗಲಿದೆ. 

       ಹಾಗಾಗಿ ಇನ್ನು ಎರಡು ವರ್ಷಗಳ ಕಾಲ ಬೆಂಗಳೂರು ವಿಶ್ವವಿದ್ಯಾಲಯ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಮೂರು ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳು ಪಾಲಿಸಬೇಕು. ಆದರೆ ಇದೀಗ ಜು.2ರಿಂದಲೇ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದರಿಂದ ಎಲ್ಲಾ ಗೊಂದಲಕ್ಕೂ ತೆರೆಬಿದ್ದಂತಾಗಿದೆ.

 
 

LEAVE A REPLY

Please enter your comment!
Please enter your name here