ತುಮಕೂರು ಜಿಲ್ಲಾಧಿಕಾರಿಯಾಗಿ ಡಾ.ರಾಕೇಶ್ ಕುಮಾರ್

0
85

 ತುಮಕೂರು:

      ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಕೇಶ್ ಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ರಾಕೇಶ್ ಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

      2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಅವರನ್ನು ವರ್ಗಾವಣೆಗೊಳಿಸಿ ಡಾ.ಆರ್.ವಿಶಾಲ್ ಅವರನ್ನು ನಿಯುಕ್ತಿಗೊಳಿಸಲಾಗಿತ್ತು. ಚುನಾವಣೆ ಮುಗಿದ ಬಳಿಕ ಆರ್.ವಿಶಾಲ್ ಅವರು ವರ್ಗಾವಣೆಗೊಳ್ಳುತ್ತಾರೆ ಎಂದೇ ಹೇಳಲಾಗುತ್ತಿತ್ತು. ಅದರಂತೆ ಈಗ ಡಾ.ರಾಕೇಶ್ ಕುಮಾರ್ ಅವರನ್ನು ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here