ತೆರವಾಗಿರುವ ವಿಧಾನಪರಿಷತ್ತಿನ ಸ್ಥಾನಗಳಿಗೆ ಅ.3 ರಂದು ಉಪ ಚುನಾವಣೆ

0
85

ಬೆಂಗಳೂರು: Image result for voting in karnataka

        ಡಾ.ಜಿ.ಪರಮೇಶ್ವರ, ಕೆ.ಎಸ್‌.ಈಶ್ವರಪ್ಪ ಮತ್ತು ವಿ.ಸೋಮಣ್ಣ ರವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಅಕ್ಟೋಬರ್‌ 3 ರಂದು ಉಪ ಚುನಾವಣೆ ನಡೆಯಲಿದೆ.

      ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದೇ 14 ರಂದು ಉಪಚುನಾವಣೆಗೆ ಅಧಿಸೂಚನೆ ಹೊರಬೀಳಲಿದೆ.

      ಈ ಮೂವರೂ ವಿಧಾನಸಭೆಗೆ ಆಯ್ಕೆ ಆಗಿದ್ದರಿಂದ ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪರಮೇಶ್ವರ್ ಮತ್ತು ಈಶ್ವರಪ್ಪ ಅವಧಿ 2020, ಸೋಮಣ್ಣ ಅವಧಿ 2022 ರವರೆಗೆ ಇತ್ತು.

   ‘ನಮ್ಮ ಪಕ್ಷಕ್ಕೆ ಒಂದು ಸ್ಥಾನ ಸಿಗುತ್ತದೆ. ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

LEAVE A REPLY

Please enter your comment!
Please enter your name here