ದೀಪಿಕಾ ಪಡುಕೋಣೆ ಅಪಾರ್ಟ್ ಮೆಂಟ್ ಗೆ ಬೆಂಕಿ

0
44

ಮುಂಬೈ :

ಇಲ್ಲಿನ ವರ್ಲಿ ಪ್ರದೇಶದಲ್ಲಿರುವ ಅಪ್ಪಾಸಾಹೇಬ್ ಮರಾಠೆ ಮಾರ್ಗದ ಅಪಾರ್ಟ್ಮೆಂಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 95 ಜನರನ್ನು ಇಲ್ಲಿ ತನಕ ರಕ್ಷಿಸಲಾಗಿದೆ ಎಂದು ತಕ್ಷಣದ ಮಾಹಿತಿ ಸಿಕ್ಕಿದೆ. ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಹಲವು ಸ್ಟಾರ್ ನಟ ನಟಿಯರು ಇದೇ ಅಪಾರ್ಟ್ಮೆಂಟ್ ನಲ್ಲಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಈ ಅನಾಹುತದ ವೇಳೆ ನಟಿ ದೀಪಿಕಾ ಪಡುಕೋಣೆ ಶೂಟಿಂಗ್ ಕಾರಣದಿಂದ ಹೊರ ಹೋಗಿದ್ದರು. ಹೀಗಾಗಿ, ಅವರ ಫ್ಲ್ಯಾಟ್ ನಲ್ಲಿ ಯಾರೂ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

      ಘಟನಾ ಸ್ಥಳದಲ್ಲಿ 12 ಅಗ್ನಿಶಾಮಕದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. 

LEAVE A REPLY

Please enter your comment!
Please enter your name here