ದೈಹಿಕ, ಮಾನಸಿಕ ನೆಮ್ಮದಿಗೆ ಕ್ರೀಡೆಗಳು ಸಹಕಾರಿ

0
50

ಗುಬ್ಬಿ

     ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಿಸುವುದರ ಜೊತೆಗೆ ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ತಿಳಿಸಿದರು.
ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶುಭೋದಯ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ಶೈಕ್ಷಣ ಪ್ರಗತಿಗೆ ಹೆಚ್ಚು ಸಹಕಾರಿಯಾಗಲಿದ್ದು ಕಲಿಕೆಯ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸುವ ಮೂಲಕ ಉತ್ತಮ ಕ್ರೀಡಾ ಪಟುಗಳಾಗಿ ಹೊರಬರುವಂತೆ ಕರೆನೀಡಿದರು.

       ಯುವಶಕ್ತಿ ಈ ದೇಶದ ಸಂಪತ್ತು ಯುವಕರು ವ್ಯಾಸಂಗದ ಜೊತೆಗೆ ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯು ಭಾಗವಹಿಸಬೇಕು. ಶಿಕ್ಷಣಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತೇವೆಯೋ ಹಾಗೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದು ಸಾಕಷ್ಟು ವಿಕಲಚೇತನರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದ ಮೇಲೆ ನೀವು ಏಕೆ ಸಾಧನೆ ಮಾಡಬಾರದು. ಸೋಲು ಗೆಲುವು ಆಟದಲ್ಲಿ ಇದ್ದೆ ಇರುತ್ತದೆ ಅದು ಮುಖ್ಯವಲ್ಲ, ಇಲ್ಲಿ ಆಟ ಆಡುವುದು ಮುಖ್ಯ ಎಂದು ತಿಳಿಸಿದರು. ಜಿಲ್ಲೆಗೆ ಗುಬ್ಬಿ ತಾಲೂಕು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಳೆದ ಭಾರಿಗೆ ಪ್ರಥಮ ಸ್ಥಾನ ಬಂದಂತೆ ಕ್ರೀಡೆಯಲ್ಲಿಯೂ ಕ್ರೀಡೆಯಲ್ಲಿಯೂ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಎಂದು ತಿಳಿಸಿದರು.

      ಶುಭೋದಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ ತಾಲ್ಲೂಕಿನ ಸಾಕಷ್ಟು ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಸಹ ಸಾಕಷ್ಟು ಕ್ರೀಡಾ ಪಟುಗಳು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ದಾಖಲೆ ನಿರ್ಮಿಸಿದ್ದಾರೆ. ಅವರಿಗೆ ಸೂಕ್ತ ಅವಕಾಶಗಳ ಅವಶ್ಯಕೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾ ಸ್ಪೂರ್ತಿ ದೊರೆತಲ್ಲಿ ಖಂಡಿತವಾಗಿಯು ಕ್ರೀಡೆಯಲ್ಲಿ ಯಶಸ್ಸು ಪಡೆಯಬಹುದು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ಹೊಸ ಆಯಾಮ ನೀಡಲಿದ್ದು ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಪೂರಕವಾಗಲಿವೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಿ.ಆರ್.ಶಿವಕುಮಾರ್, ದೈಹಿಕ ಶಿಕ್ಷಣ ಸಂಯೋಜಕ ಅಶ್ವಥಪ್ಪ, ಕ್ರೀಡಾ ಪ್ರೋತ್ಸಾಹಕರಾದ ಸಿ.ಆರ್.ಶಂಕರ್ ಕುಮಾರ್, ಅಧ್ಯಾಪಕರುಗಳಾದ ಎಸ್.ಎಲ್.ರಾಜಣ್ಣ, ಆರ್.ಬೀರೇಂದ್ರ, ಎನ್.ರಾಜಣ್ಣ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here