ದೋಸ್ತಿ ಸರ್ಕಾರಕ್ಕೆ ಕಂಟಕವಿಲ್ಲ – ಡಿಸಿಎಂ

0
25

ಬೆಂಗಳೂರು:

ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಭದ್ರವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

      ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಕನಿಷ್ಟ ಕಾರ್ಯಕ್ರಮದ ಸಭೆಯ ನಂತರ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಯಾವಾಗ ಬೇಕಾದರೂ ಆಗಬಹುದು, 24 ಗಂಟೆಯೊಳಗೆ ಆದ ಉದಾಹರಣೆಯೂ ಇದೆ. ಹಾಗಾಗಿ ಬಜೆಟ್ ನಂತರವಾದರೂ ಆಗಬಹುದು ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

      ಕಳೆದ ಸರ್ಕಾರ ಕೈಗೊಂಡ ಯೋಜನೆಗಳ ಮುಂದುವರಿಕೆಯಾಗಿ ಸಮನ್ವಯ ಸಮಿತಿಯ ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯನ್ನು ತಿಳಿಸಲಾಗುವುದು ಎಂದೂ ಕೂಡ ತಿಳಿಸಿದರು.

LEAVE A REPLY

Please enter your comment!
Please enter your name here