ನಗರದ ಪುಟ್‍ಬಾತ್ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಜಾಗ್ರತೆ ವಹಿಸಲು ಎಐಟಿಯುಸಿ ಆಗ್ರಹ

0
29

 ಚಳ್ಳಕೆರೆ:

      ಕಳೆದ ನೂರಾರು ವರ್ಷಗಳಿಂದ ಚಳ್ಳಕೆರೆ ನಗರದ ವಿವಿಧ ರಸ್ತೆಗಳ ಬದಿಯಲ್ಲಿ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳು ತಮ್ಮ ದಿನಿತ್ಯದ ವ್ಯಾಪಾರವನ್ನು ಮಾಡಿ ಅದರಿಂದ ಬರುವ ಅಲ್ಪ ಆದಾಯದಲ್ಲಿ ಜೀವನ ನಡೆಸುತ್ತಿದ್ದಾರೆ. ಆದರೆ, ಸ್ಥಳೀಯ ಕಂದಾಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ನೂತನ ಬಸ್ ನಿಲ್ದಾಣ ನಿರ್ಮಾಣದ ಹಿನ್ನೆಲೆಯಲ್ಲಿ ದಿಢೀರನೆ ಪುಟ್‍ಬಾತ್ ವ್ಯಾಪಾರಿಗಳ ತೆರವಿಗೆ ಮುಂದಾಗಿರುವುದು ನ್ಯಾಯಸಮ್ಮತವಲ್ಲವೆಂದು ಎಐಟಿಯುಸಿ ಜಿಲ್ಲಾ ಸಂಚಾಲಕ ಸಿ.ವೈ.ಶಿವರುದ್ರಪ್ಪ ಆರೋಪಿಸಿದ್ಧಾರೆ.

      ಅವರು, ಮಂಗಳವಾರ ಇಲ್ಲಿನ ಹೊಸ ಸಂತೆ ಮೈದಾನದಿಂದ ಸುಮಾರು 500ಕ್ಕೂ ಹೆಚ್ಚು ಪುಟ್‍ಬಾತ್ ವ್ಯಾಪಾರಸ್ಥರು ತಾಲ್ಲೂಕು ಆಡಳಿತ ಮತ್ತು ನಗರಸಭೆ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್‍ಗೆ ಮನವಿ ಪತ್ರ ಅರ್ಪಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಕಳೆದಹಲವಾರು ವರ್ಷಗಳಿಂದ ನಗರದ ಅಭಿವೃದ್ಧಿಯ ಚಿತ್ರಣವೇ ಬದಲಾಗಿದೆ. ವಿಶೇಷವಾಗಿ ಎಲ್ಲಾ ರಸ್ತೆಗಳು ವಿಸ್ತರಣೆಯತ್ತ ಸಾಗಿವೆ. ನಗರದ ಚಿತ್ರದುರ್ಗ ಹಾಗೂ ಬೆಂಗಳೂರು ರಸ್ತೆಗಳಲ್ಲಿ ಪುಟ್‍ಬಾತ್ ವ್ಯಾಪಾರಿಗಳು ಅಭಿವೃದ್ಧಿ ದೃಷ್ಠಿಯಿಂದ ಯಾವುದೇ ಕಾರ್ಯಕ್ಕೂ ಅಡ್ಡಿ ಪಡಿಸದೆ ಸಹಕಾರ ನೀಡಿದ್ದರು. ಇಂದಿಗೂ ಸಹ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ನಮ್ಮ ಆಕ್ಷೇಪಣೆ ಇಲ್ಲ, ಬದಲಾಗಿ ಎಲ್ಲರಿಗೂ ವ್ಯಾಪಾರಕ್ಕೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿದರು.

      ತಹಶೀಲ್ದಾರ್ ಪರವಾಗಿ ಮನವಿ ಸ್ವೀಕರಿಸಿದ ಶಿರಸ್ಥೇದಾರ್ ಚಂದ್ರಶೇಖರ್ ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಬೇಡಿಕೆ ಈಡೇರಿಕೆಗೆ ಕಾಯೋನ್ಮುಖರಾಗುವಂತೆ ಸೂಚನೆ ನೀಡಲಾಗುವುದು ಎಂದರು. ಪ್ರತಿಭಟನೆಯಲ್ಲಿ ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಬಿ.ಹನುಮಂತರಾಯ, ಸುನೀಲ್‍ಬಾನು, ತಿಪ್ಪೇಸ್ವಾಮಿ, ಉಮೇಶ್, ಮಂಜುನಾಥ, ಹೇಮಂತಕುಮಾರ್, ಭೀಮಣ್ಣ, ಪಟೇಲ್, ಈರಕ್ಕ, ನಾಗೇಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here