ನನ್ನ ಅವಧಿಯಲ್ಲಿ 15 ಕೋಟಿಗಿಂತ ಹೆಚ್ಚು ಅನುದಾನ – ಮಾಜಿ ಶಾಸಕ ಹೆಚ್.ಪಿ.ರಾಜೇಶ್

0
28

ಜಗಳೂರು :


      ನನ್ನ ಅಧಿಕಾರದ 5 ವರ್ಷದ ಅವಧಿಯಲ್ಲಿ ಪಟ್ಟಣದ ಅಭಿವೃದ್ದಿಗೆ 15 ಕೋಟಿ ರೂ. ಗೂ ಹೆಚ್ಚು ಅನುದಾನವನ್ನು ನೀಡುವ ಮೂಲಕ ಪಟ್ಟಣವನ್ನು ಅಭಿವೃದ್ದಿ ಪಡಿಸಲಾಗಿದೆ ಎಂದು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಹೇಳಿದರು.

      ಪಟ್ಟಣದ ವಾಲ್ಮೀಕಿ ಭವನದಲ್ಲಿ ಪಟ್ಟಣ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

      ಪಟ್ಟಣದಲ್ಲಿ 25 ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಜನಸಂಖ್ಯೆಗೆ ಅನುಗುಣವಾಗಿ 15 ವಾರ್ಡ್‍ಗಳನ್ನು 18 ವಾರ್ಡ್‍ಗಳನ್ನಾಗಿ ಹೆಚ್ಚಿಸಲಾಗಿದ್ದು, ಇದೇ ತಿಂಗಳು 29 ರಂದು ನಡೆಯುವ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ 15 ಸ್ಥಾನಗಳಿಗೂ ಹೆಚ್ಚು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಾಗುವುದು, ಪಕ್ಷದ ಟಿಕೇಟ್ ಯಾರಿಗೇ ನೀಡಿದರು ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

      ಪಟ್ಟಣದ ಅಭಿವೃದ್ದಿಗಾಗಿ ಪಟ್ಟಣ ಪಂಚಾಯ್ತಿ ನೂತನ ಕಟ್ಟಡಕ್ಕೆ 3 ಕೋಟಿ ರೂ. ಅನುದಾನ, ಕೆರೆ ಅಭಿವೃದ್ದಿಗೆ 4 ಕೋಟಿ ರೂ, ನಾಟರಾಜ ಸಿನಿಮಾ ಮಂದಿರದಿಂದ ಮಹಾತ್ಮಗಾಂಧಿ ವೃತ್ತದ ವರೆಗೂ ರಸ್ತೆ ಅಗಲೀಕರಣಕ್ಕೆ 2 ಕೋಟಿ, ಮಹಾತ್ಮಗಾಂಧಿ ವೃತ್ತದಿಂದ ನಾಲಂದ ಕಾಲೇಜು ರಸ್ತೆ ಅಗಲೀಕರಣಕ್ಕೆ 1 ಕೋಟಿ ರೂ, ಪಟ್ಟಣದಲ್ಲಿ 4 ಶುದ್ದ ಕುಡಿಯುವ ನೀರಿನ ಘಟಕ, 250 ಎಕರೆ ವಿಶಾಲ ಜಾಗದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ 40 ಲಕ್ಷ ರೂ, ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ 270 ಮನೆಗಳು, ಪಟ್ಟಣ ಪಂಚಾಯ್ತಿ ವತಿಯಿಂದ 450 ಮನೆಗಳನ್ನು ನೀಡುವ ಮೂಲಕ ಅಭಿವೃದ್ದಿಗೆ ಶ್ರಮಿಸಲಾಗಿದೆ ಎಂದು ಹೇಳಿದರು.

      ಪ್ರಚಾರ ಸಮಿತಿ ಅಧ್ಯಕ್ಷ ಕಲ್ಲೇಶ್‍ರಾಜ್‍ಪಟೇಲ್ ಮಾತನಾಡಿ ರಾಜ್ಯ ಸರ್ಕಾರ 40 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದು, ಇದು ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಇರುವುದರಿಂದ ಸ್ಥಳೀಯ ಚುನಾವಣೆ ಕಾಂಗ್ರೆಸ್ ಪಾಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ, ಈ ಹಿಂದೆ ಪಟ್ಟಣ ಪಂಚಾಯ್ತಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದವರು 5 ವರ್ಷಗಳ ಕಾಲ ಯಾವುದೇ ಕಪ್ಪುಚುಕ್ಕಿ ಇಲ್ಲದಂತೆ ಅಧಿಕಾರ ನಡೆಸಿದ್ದಾರೆ, ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರು ಸ್ಥಳೀಯ ಕಾರ್ಯಕರ್ತರು ಅವರ ಹಾಗೂ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ರಾಜ್ಯ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ತಾಲೂಕು ಪಂಚಾಯ್ತಿ ಸದಸ್ಯ ಕುಬೇಂದ್ರಪ್ಪ, ಪಟ್ಟಣ ಪಂಚಾಯ್ತಿ ಸದಸ್ಯರಾದ ಹಾಲಸ್ವಾಮಿ, ಇಕ್ಬಾಲ್, ಬಂಗಾರಪ್ಪ, ಚಂದ್ರಣ್ಣ, ಅಪ್ಸರ ಮಂಜು, ಸೇರಿದಂತೆ ಪಲ್ಲಾಗಟ್ಟೆ ಶೇಖರಪ್ಪ, ನಾಯಕ ಸಮಾಜದ ಮಾಜಿ ಕಾರ್ಯದರ್ಶಿ ಲೋಕೇಶ್, ಅಹಮದ್‍ಅಲಿ ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here