ನಾಳೆಯಿಂದ ಬಿಜೆಪಿಯ 3 ತಂಡಗಳ ರಾಜ್ಯ ಪ್ರವಾಸ

0
53

ಬೆಂಗಳೂರು:Related image

     ನಾಳೆಯಿಂದ (ಆಗಸ್ಟ್ 9)  ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಆರಂಭಿಸಲಿದ್ದು, ರಾಜ್ಯ ನಾಯಕರ ಮೂರು ತಂಡಗಳು ವಿವಿಧ ಜಿಲ್ಲೆಗಳಲ್ಲಿ ಸಂಚಾರ ನಡೆಸಲು ತೀರ್ಮಾನ ಕೈಗೊಂಡಿದೆ.

      2019ರ ಲೋಕಸಭೆ ಚುನಾವಣೆಯಲ್ಲಿ 20+ ಸ್ಥಾನಗಳನ್ನು ಗಳಿಸುವ ಗುರಿ ಹೊಂದಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು, ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ದುರಾಡಳಿತ, ವರ್ಗಾವಣೆ ದಂಧೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.

ಯಡಿಯೂರಪ್ಪ ನೇತೃತ್ವದ ತಂಡ:

Related image

      ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮೊದಲ ತಂಡವನ್ನು ರಚನೆ ಮಾಡಲಾಗಿದೆ. ಯಡಿಯೂರಪ್ಪ, ಗೋವಿಂದ ಕಾರಜೋಳ ಮತ್ತು ಶೋಭಾ ಕರಂದ್ಲಾಜೆ ಅವರು ತಂಡದಲ್ಲಿದ್ದಾರೆ.

ಈ ತಂಡ ಬೀದರ್, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದೆ.

ಶೆಟ್ಟರ್ ಮತ್ತು ಅಶೋಕ್ ನೇತೃತ್ವ:

Image result for r ashok and jagadish shettar

      ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ 2ನೇ ತಂಡ ರಚನೆ ಮಾಡಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಂಡದಲ್ಲಿದ್ದಾರೆ. 

ಈ ತಂಡ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದೆ.

ಈಶ್ವರಪ್ಪ ನೇತೃತ್ವ:

      ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ 3ನೇ ತಂಡ ರಚನೆ ಮಾಡಲಾಗಿದೆ.

ಈ ತಂಡ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು

LEAVE A REPLY

Please enter your comment!
Please enter your name here