ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಜಿಲ್ಲೆಗೆ ಮಾದರಿ-ಸಂಸದ ಜಿ.ಎಂ. ಸಿದ್ದೇಶ್ವರ್

0
28

ಜಗಳೂರು :

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಜಿಲ್ಲೆಗೆ ಮಾಧರಿಯಾಗಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಚಾಪನ್ನು ಮೂಡಿಸುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 1 ಕೋಟಿ ರೂ ವೆಚ್ಚದ ಶಾಲಾ ಕೊಠಡಿ ಕಾಮಗಾರಿಗೆ ಗುದ್ದಲಿ ಪೂಜೆಗೆ ಚಾಲನೆ ನೀಡಿ, ಮಾತನಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದು ಕೊಠಡಿಗಳ ಅವಶ್ಯಕತೆ ಇರುವುದರಿಂದ ಹೆಚ್ಚವರಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸಮರ್ಪಕ ಕಾಮಗಾರಿ ನಡೆಯಲು ಉಪನ್ಯಾಸಕರು ಗಮನಹರಿಸಬೇಕು. ಗುತ್ತಿಗೆದಾರರು ಸಹ ಗುಣ ಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚಿಸಿದರು.

    ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ ತಾಲೂಕು ಬರದನಾಡಗಿದ್ದರು ಸಹ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದುತ್ತಿದೆ. ಶಾಲೆಯ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಪ್ರಭಾರಿ ಅಧ್ಯಕ್ಷೆ ಸವಿತಾ, ಸದಸ್ಯರಾದ ಮಂಜುನಾಥ್, ಶಾಂತಕುಮಾರಿ,ತಾಲೂಕು ಪಂಚಾಯಿತಿ ಉಪಧ್ಯಕ್ಷ ಮುದೇ ಗೌಡ್ರು ಬಸವರಾಜ್,ತಾ.ಪಂ.ಸದಸ್ಯರಾದ ಸಿದ್ದೇಶ್,ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ವಿ.ನಾಗಪ್ಪ, ಜಿಲ್ಲಾ ಪಂಚಾಯಿತಿ ಎಇಇ ಚಂದ್ರಶೇಖರ್ , ಹಿರಿಯ ಅಭಿಯಂತರ ದಯನಂದಸ್ವಾಮಿ, ಬಿದರಕೆರೆ ರವಿಕುಮಾರ್, ಸೂರಲಿಂಗಪ್ಪ, ಓಬಳೇಶ್, ಪ.ಪಂ.ಸದಸ್ಯ ಆರ್.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಎಂ.ಎಸ್.ಪಾಟೀಲ್, ಹುಲಿಕುಂಟೆ ಶೆಟ್ಟಿ, ಹನುಮಂತಪ್ಪ, ಕ್ಷೇತ್ರಶಿಕ್ಷಣಾಧಿಕಾರಿ, ಕಾಲೇಜಿನ ಉಪಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here