ಪದವಿ ಪ್ರದಾನ ಸಮಾರಂಭ

0
17

ತುಮಕೂರು

             ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ನಂತರ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕುಲಪತಿ ಡಾ.ಜಿ.ಪರಮೇಶ್ವರ್, ತುಮಕೂರು ನಗರದ ಹೊರವಲಯದಲ್ಲಿರುವ ಈ ಸಂಸ್ಥೆಯು ಗ್ರಾಮಾಂತರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಿದೆ. ನಮ್ಮ ತಂದೆ ದಿವಂಗತ ಎಚ್.ಎಂ.ಗಂಗಾಧರಯ್ಯನವರಿಂದ ಸ್ಥಾಪಿತವಾದ ಈ ಸಂಸ್ಥೆಯು ನಮ್ಮ ತಂದೆಯ ನಂತರ ಸಹೋದರ ಡಾ.ಶಿವಪ್ರಸಾದ್‍ರವರು ನಡೆಸಿಕೊಂಡು ಬಂದಿದ್ದರು. ಅವರ ನಂತರದಿಂದ ನಾನು ಮುನ್ನಡೆಸುಕೊಂಡು ಹೋಗುತ್ತಿದ್ದೇನೆ. ಈ ಸಂಸ್ಥೆಯು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವುದೇ ನಮ್ಮ ಗುರಿಯನ್ನಾಗಿಸಿಕೊಂಡಿದ್ದು, ಅದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
                ಉಪಕುಲಪತಿಗಳಾದ ಡಾ.ಪಿ.ಬಾಲಕೃಷ್ಣ ಶೆಟ್ಟಿ ಮಾತನಾಡುತ್ತಾ, ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ಮಾತ್ರವಲ್ಲದೆ ಪ್ರಾಯೋಗಿಕವಾಗಿ ನೈಸರ್ಗಿಕದತ್ತ ಯೋಜನೆಗಳನ್ನು ಹಾಕುವ ಮೂಲಕ ಪಠ್ಯೇತರ ಚಟುವಟಿಕೆಗಳನ್ನು ಕೂಡ ಮಾಡಿಸಲಾಗುತ್ತದೆ. ಇಲ್ಲಿನ ವಿದ್ಯಾರ್ಥಿಗಳು ಗ್ರಾಮಾಂತರ ಭಾಗದ ಪ್ರಾಥಮಿಕ ಪಾಠಶಾಲೆಗಳಿಗೆ ಹೋಗಿ ಪಾಠಗಳನ್ನು ಕೂಡ ಮಾಡುತ್ತಾರೆ. ಇದು ಗ್ರಾಮೀಣ ವಿಶ್ವವಿದ್ಯಾಲಯ ಎಂದರೂ ತಪ್ಪಾಗಲಾರದು. ಇಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದರು.
               ಪರೀಕ್ಷಾಂಗ ಕುಲಸಚಿವರಾದ ಡಾ.ಎಂ.ಝಡ್.ಕುರಿಯನ್ ಮಾತನಾಡಿ, 7ನೇ ವರ್ಷದ ಘಟಿಕೋತ್ಸವ ಆಚರಣೆ ಮಾಡಲಾಗಿದ್ದು, ಇದರಲ್ಲಿ ಒಂದೊಂದು ವಿಭಾಗದಲ್ಲಿನ ಒಬ್ಬೊಬ್ಬ ಟಾಪರ್‍ನಂತೆ 18ಜನ ಟಾಪರ್ಸ್‍ಗಳಿಗೆ ಚಿನ್ನದ ಪದಕಗಳನ್ನು ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೆಡಿಕಲ್, ಡೆಂಟಲ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 729 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇದಲ್ಲದೆ ನಾಲ್ಕು ಜನರಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು ಎಂದು ತಿಳಿಸಿದರು.
ಸಮಾರಂಭದಲ್ಲಿ ಡಾ.ಎಂ.ಕೆ.ವೀರಯ್ಯ, ಡಾ: ಜಿ.ಎಂ. ಶಿವಕುಮಾರಪ್ಪ, ಡಾ.ಕಾಶೀನಾಥ್, ಡಾ.ಆನಂದ್‍ಸಾಗರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ವಿಸ್‍ನೆಕ್ಸ್‍ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಬಾಸ್ಟೀನ್ ಹಗ್ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here