ಪೂರ್ಣ ಪ್ರಮಾಣದ ಬಜೆಟ್ ಬದಲು ಪರಿಷ್ಕತ ಬಜೆಟ್

0
23

 ಬೆಂಗಳೂರು:

ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಪೂರ್ಣ ಪ್ರಮಾಣದ ಬಜೆಟ್ ಬದಲು ಪರಿಷ್ಕತ ಬಜೆಟ್ ಮಂಡಿಸುವುದು ಬಹುತೇಕ ಖಚಿತವಾಗಿದೆ.

      ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಆಕ್ಷೇಪದ ನಡುವೆ ಸ್ವಲ್ಪ ಮಟ್ಟಿಗೆ ರಾಜೀಯಾದಂತೆ ಕಂಡು ಬಂದಿರುವ ಕುಮಾರ ಸ್ವಾಮಿ, ಹಿಂದಿನ ಸರ್ಕಾರದ ಬಜೆಟ್‍ನಲ್ಲಿ ಈಗಿನ ಸರ್ಕಾರದ ಕೆಲ ಕಾರ್ಯಕ್ರಮಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

      ಹಣಕಾಸು ಇಲಾಖೆ ಕಾರ್ಯದರ್ಶಿಗಳು ವಿಧಾನಸಭೆ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಅವರು ಪರಿಷ್ಕøತ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿರುವುದು ಸಿದ್ದರಾಮಯ್ಯ ಅವರ ವಾದಕ್ಕೆ ಬಲ ಬಂದಂತಾಗಿದೆ.

      ಪೂರ್ಣ ಪ್ರಮಾಣದ ಬಜೆಟ್ ಬದಲಾಗಿ ಪೂರಕ ಬಜೆಟ್ ಮಂಡಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ತಾವು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿಯೇ ಸಿದ್ಧ ಎಂದಿದ್ದರು.

      ಕಳೆದ ಸಾಲಿನಲ್ಲಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿರುವ ಅಂಶಗಳ ಪೈಕಿ ಕೆಲವನ್ನು ಬಿಟ್ಟು ಕೆಲವನ್ನು ಸೇರ್ಪಡೆ ಮಾಡಿಕೊಂಡು ಬಜೆಟ್ ಸಿದ್ಧಪಡಿಸಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಮುಂತಾದ ಯೋಜನೆಗಳ ಜತೆಗೇ ಜೆಡಿಎಸ್ ಪ್ರಣಾಳಿಕೆಯಲ್ಲಿರುವ ರೈತರ ಸಾಲಮನ್ನಾ, ಸಾಮಾಜಿಕ ಪಿಂಚಣಿ ಯೋಜನೆಗಳ ಮೊತ್ತ ಏರಿಕೆ ಮುಂತಾದ ಕಾರ್ಯಕ್ರಮಳು ಘೋಷಣೆ ಆಗುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here