ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನವಾದ

0
38

ಮೈಸೂರು:

      ಪ್ರತ್ಯೇಕ ರಾಜ್ಯ ಕೇಳುವವರದ್ದು ಮೂರ್ಖತನದ ವಾದ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

      ಮೈಸೂರಿನಲ್ಲಿ ಮಾತನಾಡುತ್ತಿದ್ದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರಕರ್ನಾಟಕ ಭಾಗಕ್ಕೆ ಕೋಟ್ಯಾಂತರ ರೂ.ಗಳನ್ನು ಅಭಿವೃದ್ದಿಗೆ ನೀಡಿದ್ದೇನೆ. ಆದರೆ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಆ ಭಾಗಕ್ಕೆ ಏನು ಕೊಟ್ಟಿದ್ದಾರೆ ಎಂಬುದನ್ನು ಮೊದಲು ಅರಿತು ಮಾತನಾಡಲಿ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

      ಅಖಂಡ ಕರ್ನಾಟಕ ಹೋರಾಟ ಗೊತ್ತಿರದವರು, ಪ್ರತ್ಯೇಕ ರಾಜ್ಯ ಕೇಳುತ್ತಿದ್ದಾರೆ. ಹಿಂದುಳಿದ ಪ್ರದೇಶದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯನವರು, ಉಮೇಶ್‍ಕತ್ತಿ ಸೇರಿದಂತೆ ಮತ್ತಿತರರು ಆ ಭಾಗಕ್ಕೆ ಯಾವ ಕೊಡುಗೆ ನೀಡಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here