ಪ್ರಥಮ ದರ್ಜೆ ಕಾಲೇಜು ಮಂಜೂರು : ಶಾಸಕ ಎಸ್.ವಿ.ರಾಮಚಂದ್ರ ಭರವಸೆ

0
35

 ಜಗಳೂರು :

      ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೀಘ್ರವೇ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡಿಸಲಾಗುವುದು ಎಂದು ಶಾಸಕ ಎಸ್.ವಿ.ರಾಮಚಂದ್ರ ಭರವಸೆ ನೀಡಿದರು.

      ತಾಲೂಕಿನ ಪಲ್ಲಾಗಟ್ಟೆ ಗ್ರಾಮದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 1 ಕೋಟಿ ವೆಚ್ಚದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

      ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜು ಇದಾಗಿದ್ದು, ಪ್ರತಿ ಭಾರಿಯೂ ಉತ್ತಮ ಫಲಿತಾಂಶವನ್ನು ಪಡೆಯುತ್ತಿದೆ. ಇದಕ್ಕೆ ಇಲ್ಲಿನ ಉಪನ್ಯಾಸಕ ವರ್ಗದವರ ಶ್ರಮವೇ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮೊದಲ ಸ್ಥಾನಗಳಿಸಲು ಉಪನ್ಯಾಸಕರು ಶ್ರಮಿಸಬೇಕಾಗಿದೆ ಎಂದು ಹೇಳಿದರು.

      ಕಾಲೇಜಿಗೆ ಬೇಕಾಗಿರುವ ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಕೊಠಡಿಗಳ ನಿರ್ಮಾಣದ ಮೊದಲು ಶೀಘ್ರವೇ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೈಟೆಕ್ ಶೌಚಾಲಯವನ್ನು ನಿರ್ಮಿಸಿ ನಂತರ ಕೊಠಡಿಗಳ ಕಾಮಗಾರಿಯನ್ನು ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

      ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಕೂಟಕ್ಕೂ ಆಧ್ಯತೆಯನ್ನು ನೀಡಬೇಕು, ಈ ಹಿಂದೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಪ್ರತೀ ವರ್ಷವೂ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದೆನು, ಆದರೆ ಕಳೆದು ಐದು ವರ್ಷಗ ಳಿಂದ ಒಂದು ಕ್ರೀಡಾಕೂಟವನ್ನು ಏರ್ಪಡಿಸದೇ ಇರುವುದು ವಿಪರ್ಯಾಸತ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಕ್ರೀಡಾ ಕೂಟವನ್ನು ಏರ್ಪಡಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

      ಜಿಲ್ಲಾ ಪಂಚಾಯ್ತಿ ಸದಸ್ಯ ಸವಿತಾಕಲ್ಲೇಶಪ್ಪ ಮಾತನಾಡಿ ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡದೇ ಪಕ್ಷಾತೀತ ವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

      ಮಾಜಿ ಎಪಿಎಂಸಿ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್ ಮಾತನಾಡಿ 2006-07 ರಲ್ಲಿ ಈ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರಾ ದಾಗ ಕಟ್ಟಡ ಇಲ್ಲದೇ ಬಾಡಿಗೆ ಕೊಠಡಿಗಳಲ್ಲಿ ಕಾಲೇಜನ್ನು ನಡೆಸಲಾಗುತ್ತಿತ್ತು, ನಾನು ಎಪಿಎಂಸಿ ಅಧ್ಯಕ್ಷನಾದಾಗ 2 ಕೊಠಡಿಗಳ ನಿರ್ಮಾಣ ಮಾಡಲಾಗಿತ್ತು. ನಂತರ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಜಯಲಕ್ಷ್ಮೀಮಹೇಶ್ ಅವರ ಅವಧಿಯಲ್ಲಿ ಕಾಲೇಜು ಮೈದಾನಕ್ಕೆ 5 ಎಕರೆ ಜಾಗವನ್ನು ಮಂಜೂರು ಮಾಡಲಾಯಿತು. ಗ್ರಾಮದಲ್ಲಿ ಬಾಲಕೀಯರ ಹಾಸ್ಪೆಲ್ ಮಂಜೂರಾಗಿದ್ದು, ಅದಕ್ಕೆ ಸ್ವಂತ ಕಟ್ಟಡ, ಕಾಲೇಜು ಮೈದಾನವನ್ನು ಅಭಿವೃದ್ದಿ ಪಡಿಸುವುದು, ಸುತ್ತ ಕಾಪೌಂಡ್ ನಿರ್ಮಾಣ, ಶಾಶ್ವತ ನೀರಿನ ವ್ಯವಸ್ಥೆ, ಪ್ರದೇಶ ಧ್ವಾರಕ್ಕೆ ಕಮಾನು ನಿರ್ಮಾಣ, ನಿರಂತರ ಜ್ಯೋತಿ ಕಲ್ಪಿಸಬೇಕು ಎಂದು ಶಾಸಕ ಎಸ್.ವಿ.ರಾಮ ಚಂದ್ರ ಅವರಿಗೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here