ಪ್ರಮಾಣವಚನ ಒಂದೆಡೆಯಾದರೆ, ಕಾಂಗ್ರೆಸ್, ಜೆಡಿಎಸ್ ನ ಪ್ರತಿಭಟನೆ ಇನ್ನೊಂದೆಡೆ..!

 -  - 


 ರಾಜ್ಯ ಮಾತ್ರವಲ್ಲದೇ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿ, ಚರ್ಚೆ ಆಗುತ್ತಿರುವ ವಿಯವೇನೆಂದರೆ ಅದುವೇ ಕರ್ನಾಟಕದಲ್ಲಿನ ನಡೆದ 2018ರ ವಿಧಾನ ಸಭಾ ಚುನಾವಣೆ ಹಾಗೂ ಹೊರಬಿದ್ದರಿರುವ ಅತಂತ್ರ ಚುನಾವಣಾ ಫಲಿತಾಂಶ. ಈಗಾಗಲೇ ಬಿಜೆಪಿ ಪಕ್ಷದವರು ನಾನಾ ರೀತಿಯ ಕಸರತ್ತುಗಳೆನ್ನೆಲ್ಲಾ ಮಾಡಿ, ಅಧಿಕಾರ ಗದ್ದುಗೆ ಏರಿದೆ ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅತ್ತ ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ನೀಡಿಲ್ಲ ಎಂದು ಪ್ರತಿಭಟನೆ ಆರಂಭಿಸಿದೆ.

ವಿಕಾಸಸೌಧ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ಗುಲಾ ಬಬಿ ಆಜಾದ್, ಜಿ.ಪರಮೇಶ್ವರ, ಜೆಡಿಎಸ್ ನ ಹೆಚ್ ಡಿಕೆ, ದೇಗೇಗೌಡರು, ಶಾಸಕರು ಸೇರಿಂದತೆ ಮುಂತಾದ ನಾಯಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲ್‌ ಟನ್ ರೆಸಾರ್ಟ್‌ನಲ್ಲಿದ್ದ ಕಾಂಗ್ರೆಸ್‌ ಶಾಸಕರು ಆಗಮಿಸುತ್ತಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸರ್ಕಾರ ರಚನೆ ವಿವಾದ ನ್ಯಾಯಾಲಯದ ಅಂಗಳದಲ್ಲಿದೆ. ನಾವು ಜನರ ಮುಂದೆ ಹೋಗುತ್ತೇವೆ. ಬಿಜೆಪಿ ಕಾನೂನಿಗೆ ವಿರುದ್ಧವಾಗಿ ಹೋಗುತ್ತಿದೆ’ ಎಂದು ಆರೋಪಿಸಿದರು. ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಅಭ್ಯರ್ಥಿ ಆರ್.ಶಂಕರ್ ಅವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರತಿಭಟನೆಗೆ ಇಬ್ಬರು ಕೈ ಶಾಸಕರು ಗೈರು
ಬೆಂಗಳೂರು: ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗೆಸ್ ನಡೆಸುತ್ತಿದ್ದ ಪ್ರತಿಭಟನೆಗೆ ಇಬ್ಬರು ಕಾಂಗ್ರೆಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಕಾಂಗ್ರೆಸ್‍ನ ಆನಂದ್ ಸಿಂಗ್ ಮತ್ತು ಪ್ರತಾಪಗೌಡ ಎಂದು ಹೇಳಲಾಗುತ್ತಿದೆ.

ರಾಜ್ಯ ಪಾಲರು ಕಾನೂನಿಗೆ ವಿರುದ್ಧವಾಗಿ ಸರ್ಕಾರ ರಚನೆ ಮಾಡಲು ಅವಕಾಶವನ್ನು ಬಿಜೆಪಿಗೆ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

comments icon 0 comments
0 notes
2 views
bookmark icon

Write a comment...

Your email address will not be published. Required fields are marked *