ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ

0
19

ಬೆಂಗಳೂರು:

  ರಾಜ್ಯದ 30 ಪ್ರವಾಸಿ ತಾಣಗಳನ್ನು 300 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

      ಮೈಸೂರಿನ ಪತ್ರಕರ್ತರ ಸಂಘದಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬದಾಮಿ, ಶ್ರವಣಬೆಳಗೊಳ, ಮೈಸೂರು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಮೈಸೂರಿನ ಹಿಮ್ಮಾವು ಬಳಿ ಫಿಲಂ ಸಿಟಿ ಆರಂಭ ಮಾಡಲು ಯೋಜನೆ ರೂಪಿಸಲಾಗಿದೆ. ಪ್ರವಾಸೋದ್ಯಮ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದರೆ ಇಲಾಖೆಯ ಅಂತರ್ಜಾಲದಲ್ಲಿ ದೂರು ದಾಖಲಿಸಬಹುದು ಎಂದರು.

      ಮೈಸೂರು ಭಾಗದ ಬೆಳೆಗಾರರ ಅನುಕೂಲಕ್ಕೆ ಹೊಸ ಮಾರುಕಟ್ಟೆ ಆರಂಭ ಮಾಡಲಾಗುತ್ತದೆ. ರಾಮನಗರದ ಮಾದರಿಯಲ್ಲಿ ಕೊಳ್ಳೆಗಾಲದಲ್ಲಿಯೂ ರೇಷ್ಮೆ ಮಾರಾಟ ಕೇಂದ್ರ ತೆರೆಯಲಾಗುವುದು, ನಕಲಿ ಮೈಸೂರು ಸಿಲ್ಕ್ ಮಾರಾಟಗಾರರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದ್ದು, ಈ ವರಮಹಾಲಕ್ಷ್ಮೀ ಹಬ್ಬದ ಉಡುಗೊರೆಯಾಗಿ ಮೈಸೂರು ಸಿಲ್ಕ್ ಸೀರೆಯನ್ನು ನಾಲ್ಕೂವರೆ ಸಾವಿರ ರೂಪಾಯಿಗೆ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here