ಫಲಿತಾಂಶ ಪ್ರಕಟ : ಯಡಿಯೂರಪ್ಪ ಪ್ರತಿಕ್ರಿಯೆ

 -  - 


 

“ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. ಅದಕ್ಕಾಗಿ ಧನ್ಯವಾದಗಳು. ನಮ್ಮ ಮುಂದಿನ ನಡೆಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ” ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇವುಗಳ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಮುಂದಿನ ನಡೆಯ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ಈಗಾಗಲೇ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ.

comments icon 0 comments
0 notes
3 views
bookmark icon

Write a comment...

Your email address will not be published. Required fields are marked *