ಬೆಂಗಳೂರನ್ನು ಕ್ರೀಡಾ ರಾಜಧಾನಿಯಾಗಿಸುವುದೇ ನಮ್ಮ ಸರ್ಕಾರದ ಬಯಕೆ -ಡಿಸಿಎಂ

0
38

ಬೆಂಗಳೂರು:

      ಸೋಮವಾರ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಸೋಮವಾರ ಭೇಟಿ ಮಾಡಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ಮೈದಾನ ನಿರ್ಮಾಣ ಹಾಗೂ ಟೆನಿಸ್ ಕ್ರೀಡೆ ಸಂಬಂಧ ಇತರೆ ವಿಚಾರಗಳ ಬಗ್ಗೆ ಚರ್ಚಿಸಿತು.

      ಕಬ್ಬನ್ ಪಾರ್ಕಿನಲ್ಲಿ ಟೆನಿಸ್ ಕೋರ್ಟ್ ಇದ್ದರೂ, ಕೆಲ ಷರತ್ತುಗಳಿರುವುದರಿಂದ ಎಲ್ಲರಿಗೂ ಈ ಕೋರ್ಟ್ ಬಳಕೆಯಾಗುತ್ತಿಲ್ಲ. ಈ ಕೋರ್ಟ್ ಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಷ ನೀಡಿ ಅಭಿವೃದ್ಧಿಪಡಿಸಿ ಎಂದು ಸದಸ್ಯರು ಮನವಿ ಸಲ್ಲಿಸಿದರು.

      ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಟೆನಿಸ್ ಅಸೋಸಿಯೇಷನ್ ಸದಸ್ಯರು ನನ್ನನ್ನು ಭೇಟಿ ಮಾಡಿ ಹಲವು ವಿಚಾರ ಚರ್ಚಿಸಿ, ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ಮೈದಾನ ನಿರ್ಮಾಣದ ಬಗ್ಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಬೆಂಗಳೂರು ಕ್ರೀಡಾ ರಾಜಧಾನಿಯಾಗಬೇಕೆಂಬುದೇ ನಮ್ಮ ಸರ್ಕಾರದ ಬಯಕೆಯಾಗಿದ್ದು, ಕ್ರೀಡೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಲಾಗುತ್ತದೆ. ನಮ್ಮ ಸರ್ಕಾರ ಎಲ್ಲಾ ಬಗೆಯ ಕ್ರೀಡೆಗಳಿಗೂ ಉತ್ತೇಜನ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕ್ರೀಡೆಗೆ ಸಾಕಷ್ಟು ಅನುದಾನ ನೀಡಿದ್ದೇವೆ ಎಂದರು.

      ನಗರದ ಹೊರವಲಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯ, ಸ್ಪೋರ್ಟ್ಸ್ ವಿಲೇಜ್ ನಿರ್ಮಾಣ, ಕ್ರೀಡಾ ಸಂಬಂಧಿತ ಸಲಕರಣೆ ಉತ್ಪಾದನೆಗೆ ಅವಕಾಶ ಸೇರಿದಂತೆ ಹಲವು ಯೋಜನೆಗಳನ್ನು ಸಿದ್ಧಪಡಿಸಿದ್ದೇವೆ. ಒಟ್ಟಾರೆ ಕ್ರೀಡೆಗೆ ನಮ್ಮ ಬೆಂಬಲವಿರಲಿದೆ ಎಂದು ಹೇಳಿದರು.

      ಈ ವೇಳೆ ಸಮಾಜ ಕಲ್ಯಾಣ ಸಚಿವ ಹಾಗೂ ಅಸೋಸಿಯೇಷನ್ ಸದಸ್ಯ ಪ್ರಿಯಾಂಕ ಖರ್ಗೆ, ಟೆನಿಸ್ ಆಟಗಾರ ರೋಹನ್ ಬೋಪಣ್ಣ ಇತರರು ಇದ್ದರು.

LEAVE A REPLY

Please enter your comment!
Please enter your name here