ಬೆಂಗಳೂರು ವಿದ್ಯುತ್ ಸಮಸ್ಯೆ ಪರಿಹರಿಸಲು ಸಿಎಂ ಯೋಜನೆ

0
25

ಬೆಂಗಳೂರು:

      ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆ ಕುರಿತು ಮೂಲ ಸೌಕರ್ಯಗಳನ್ನು ಸುಧಾರಿಸಲು ಉನ್ನತ ಮಟ್ಟದ ಸಭೆ ಕರೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

      ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯಲ್ಲಿ  ಮಾತನಾಡಿದ ಅವರು, ಬೆಂಗಳೂರಲ್ಲಿ ಅಧಿಕೃತವಾಗಿ ಪವರ್‌ ಕಟ್‌ ಎಂದು ಘೋಷಿಸದಿದ್ದರೂ ಕೂಡ ವಿದ್ಯುತ್‌ ವ್ಯತ್ಯಯ ಉಂಟಾಗುತ್ತಿದೆ, ಒಂದು ಗಂಟೆಗೆ ಕನಿಷ್ಠ ಹತ್ತಾರು ಬಾರಿ ಕರೆಂಟ್‌ ಹೋಗುತ್ತದೆ, ಈ ಸಮಸ್ಯೆಗೆ ಪರಿಹಾರ ದೊರೆತಿಲ್ಲ ಹಾಗಾಗಿ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

      ಬೆಂಗಳೂರು ನಗರದಲ್ಲಿ 3 ಸಾವಿರ ಮೆಗಾ ವ್ಯಾಟ್ ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಲು ಲೋಕೋಪಯೋಗಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊಂಡಂತೆ ಎಲ್ಲಾ ಅಧಿಕಾರಿಗಳನ್ನು ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚಿಸಿದರು. 

      ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವಹಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ತಂತಿಗಳನ್ನು ಆಳವಡಿಸಬೇಕು, ವಿದ್ಯುತ್ ಪೂರೈಕೆ ಸಂಬಂಧಿಸಿ ಯಾವುದೇ ತೊಂದರೆ ಆಗಬಾರದು ಎಂದು ತಿಳಿಸಿದರು.

      ಸಭೆಯಲ್ಲಿ ಆರ್ಥಿಕ ಇಲಾಖೆ, ಪ್ರಧಾನ ಕಾರ್ಯದರ್ಶಿ ಐ. ಎನ್. ಎಸ್ ಪ್ರಸಾದ್, ಇoಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ಮುಖ್ಯಮಂತ್ರಿ ಗಳ ಅಪರ ಮುಖ್ಯ ಕಾರ್ಯದರ್ಶಿ ವಿ.ರಮಣ ರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಭಾಗವಹಿಸಿದ್ದರು.ಕು.

 

      

     

LEAVE A REPLY

Please enter your comment!
Please enter your name here