ಮಳೆಹಾನಿ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ ಕೇಂದ್ರದ ತಂಡ

0
99

ಮಂಗಳೂರು:

      ಕರಾವಳಿಯಲ್ಲಿ ಮಳೆಹಾನಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದ್ದು, ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಉಡುಪಿಗೆ ತೆರಳಿದ್ದಾರೆ.

      ಅಧ್ಯಯನ ತಂಡವು ಇಂದು ಸಂಜೆ 6:30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲಿದ್ದಾರೆ. 

      ಅಧ್ಯಯನ ತಂಡವು ಎರಡು ದಿನಗಳ ಕಾಲ ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ ಇನ್ನೂ ಕೆಲವು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಕೇಂದ್ರವು ಪರಿಹಾರ ಬಿಡುಗಡೆ ಮಾಡಲಿದೆ. 

      ಇತ್ತೀಚೆಗಷ್ಟೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರ ನಿಯೋಗವು ದೆಹಲಿಗೆ ತೆರಳಿ ಮೋದಿ ಅವರಿಗೆ ಮಳೆ ಹಾನಿ ವರದಿ ನೀಡಿ ನೆರವಿಗೆ ಮನವಿ ಮಾಡಿದ್ದರು. ಹಾಗಾಗಿ ಕೇಂದ್ರವು ಅಧ್ಯಯನ ತಂಡವನ್ನು ಕಳುಹಿಸಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here