ಮಹಿಳಾ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಸಂಯೋಜನಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

0
28

ಹಾವೇರಿ:

ಮಹಿಳಾ ಕೇಂದ್ರ ಯೋಜನೆಯಡಿ ಸ್ಥಾಪಿಸಲಾಗುವ ಜಿಲ್ಲಾ ಮಟ್ಟದ ಮಹಿಳಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಒಂದು ಮಹಿಳಾ ಕಲ್ಯಾಣಾಧಿಕಾರಿ ಹಾಗೂ ಎರಡು ಜಿಲ್ಲಾ ಸಂಯೋಜನಾಧಿಕಾರಿಗಳ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಕಲ್ಯಾಣಾಧಿಕಾರಿ ಹುದ್ದೆಗೆ ಹ್ಯೂಮಾನಿಟಿಸ್  ಸಮಾಜ ವಿಜ್ಞಾನ, ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದು, ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ, ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ಇರಬೇಕು. ಸ್ಥಳೀಯ ಭಾಷೆ, ಉಪ ಭಾಷೆಯಲ್ಲಿ ಸಂವಹನ ನಡೆಸುವುದು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಯವರ ಜೊತೆ ಸಹಕಾರದೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸತಕ್ಕದ್ದು. ನಾಗರಿಕ ಸಮಾಜ ಸಂಘಟನೆ, ಸರ್ಕಾರೇತರ ಸಂಸ್ಥೆಯವರೊಂದಿಗೆ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆ ಬಗ್ಗೆ ಪ್ರಾವಿಣ್ಯತೆ ಹೊಂದಿರಬೇಕು, ಗರಿಷ್ಠ ವಯಸ್ಸಿನ 35 ವರ್ಷಗಳು ಹಾಗೂ ಸ್ಥಳೀಯ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜಿಲ್ಲಾ ಸಂಯೋಜನಾಧಿಕಾರಿಗಳ ಹುದ್ದೆಗೆ ಹ್ಯೂಮಾನಿಟಿಸ್  ಸಮಾಜ ವಿಜ್ಞಾನ, ಸಮಾಜಕಾರ್ಯದಲ್ಲಿ ಸಂಬಂಧಿಸಿದ ಪದವಿಯನ್ನು ಹೊಂದಿರಬೇಕು. ಜಿಲ್ಲೆಯ ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚೆನ್ನಾಗಿ ತಿಳಿದಿರಬೇಕು. ಕಂಪ್ಯೂಟರ್ ಬಳಕೆ ಬಗ್ಗೆ ಪ್ರಾವಿಣ್ಯತೆ ಹೊಂದಿರಬೇಕು, ಗರಿಷ್ಠ ವಯಸ್ಸಿನ 35 ವರ್ಷಗಳು ಹಾಗೂ ಸ್ಥಳೀಯ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎ ಬ್ಲಾಕ್, 3ನೇ ಮಹಡಿ, ಜಿಲ್ಲಾಧಿಕಾರಿಗಳ ಭವನ, ದೇವಗಿರಿ ರಸ್ತೆ ಹಾವೇರಿ ವಿಳಾಸದಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು 10-08-2018ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಲೋಚಕ ಎಂ.ಎಂ.ಬಾರ್ಕಿ ಮೊ:9945072894ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here