ಮಾಧ್ಯಮದವರು ಪೊಲೀಸರಿಗಿಂತ ವೇಗವಾಗಿದ್ದಾರೆ: ಹೈಕೋರ್ಟ್

0
15

ಬೆಂಗಳೂರು:

Related image

      ಉಡುಪಿ ಶೀರೂರು ಶ್ರೀಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

      ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಕ್ಕೆ ತಡೆ ನೀಡುವಂತೆ ಶೀರೂರು ಮಠದ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಸುದ್ದಿ ಪ್ರಸಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತ ವಿಚಾರಣೆಯನ್ನು ಆ. 2ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಏಕಸದಸ್ಯ ಪೀಠ, ಮಾಧ್ಯಮದವರು ಪೊಲೀಸರಿಗಿಂತ ವೇಗವಾಗಿದ್ದಾರೆ. ಅಂದೇ ತನಿಖೆ ನಡೆಸಿ ಶಿಕ್ಷೆಯನ್ನೂ ನೀಡುತ್ತಾರೆ ಎಂದಿದೆ.

      ಪ್ರಕರಣ ಸಂಬಂಧ ಒಂದು ಕಡೆ ಪೊಲೀಸರಿಂದ ತನಿಖೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮಾಧ್ಯಮಗಳಿಂದ ಪರ್ಯಾಯ ತನಿಖೆ ನಡೆಯುತ್ತಿದೆ. ತನಿಖೆ ನಡೆಸಿ ವರದಿ ಸಲ್ಲಿಸುವವರೆಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಕ್ಕೆ ನಿರ್ಬಂಧ ಹೇರಬೇಕು. ತನಿಖಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಬಾರದು ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here