ಮಾನನಷ್ಟ ಮೊಕದ್ದಮೆ: ಆರ್ ಎಸ್ಎಸ್, ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

0
34

ಮುಂಬೈ:

ಮಹಾತ್ಮ ಗಾಂಧಿ ಹತ್ಯೆ ಕುರಿತಂತೆ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಪರಾಧಿ ಅಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

      ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಹಾಜರಾದರು. ಈ ವೇಳೆ ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆ ನೀಡಿದ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ತಾವು ಅಪರಾಧಿ ಅಲ್ಲ ಎಂದು ಹೇಳಿದರು.

      ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ‘ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ’ ಎಂದು ಹೇಳಿದ್ದರು. ರಾಹುಲ್ ಹೇಳಿಕೆ ಸಂಬಂಧ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್‌ ಕುಂಟೆ ಎನ್ನುವವರು 2014ರಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಆರ್ ಎಸ್ ಎಸ್ ಬಿಜೆಪಿ ವಿರುದ್ಧ ವಾಗ್ದಾಳಿ

ಇದೇ ವೇಳೆ ಹೇಳಿಕೆ ನೀಡಿ ಕೋರ್ಟ್ ಆವರಣಿದಿಂದ ಹೊರಗೆ ಬಂದ ರಾಹುಲ್ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿ ಮಾನನಷ್ಟ ಮೊಕದ್ದಮೆ ಹೂಡಿರುವ ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ರೈತರ ಸಮಸ್ಯೆಗಳು, ಉದ್ಯೋಗ ಸೃಷ್ಟಿಯತ್ತ ಗಮನ ಕೊಡಬೇಕಾದ ಸರ್ಕಾರ ಅನಾವಶ್ಯಕ ವಿಚಾರಗಳನ್ನು ಗಂಭೀರವಾಗಿ ಸ್ವೀಕರಿಸಿದೆ. ರೈತರು, ಬಡವರು ಸರ್ಕಾರದ ತೀವ್ರ ಅಸಮಾಧಾನಗೊಂಡಿದ್ದು, ಈ ಸರ್ಕಾರ ಕೇವಲ ಧನಿಕರ ಪರ ಸರ್ಕಾರವಾಗಿದೆ. ಮನ್ ಕಿ ಬಾತ್ ಮಾತನಾಡು ಪ್ರಧಾನಿ ಮೋದಿ ಕಾಮ್ ಕಿ ಬಾತ್ ಬಗ್ಗೆ ಮಾತನಾಡುವುದಿಲ್ಲ. ಅವರ ಬೇಕಿದ್ದರೆ ನನ್ನ ವಿರುದ್ದ ಮತ್ತಷ್ಟು ಪ್ರಕರಣ ದಾಖಲಿಸಲಿ ಎಂದು ರಾಹುಲ್ ಗಾಂಧಿ ಹೇಳಿದರು.

ವಿಚಾರಣೆ ಬಳಿಕ ಕಾರ್ಯಕರ್ತರ ಭೇಟಿ

ಇನ್ನು ಕೋರ್ಟ್ ವಿಚಾರಣೆ ಮುಗಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಹಾಗೂ ಮುಂಬೈನ ಕಾಂಗ್ರೆಸ್ ಕಾರ್ಪೋರೇಟರ್‌ಗಳ ಜೊತೆ ನಾಗರಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here