ಮುಂಬರುವ ಚುನಾವಣೆ : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅನಿವಾರ್ಯ

0
33

ಬೆಂಗಳೂರು:


   ಲೋಕಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಅನಿವಾರ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಲವಾಗಿ ಪ್ರತಿಪಾದಿಸಿದ್ದಾರೆ.

      ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಟಿ.ಎಂ.ಸಿ, ಆಂಧ್ರಪ್ರದೇಶದಲ್ಲಿ ಟಿಡಿಪಿ, ತೆಲಂಗಾಣದಲ್ಲಿ ಟಿ.ಆರ್.ಎಸ್ ಸೇರಿದಂತೆ ಕೆಲವೆಡೆ ಪ್ರಾದೇಶಿಕ ಪಕ್ಷಗಳು ಏಕಾಂಗಿಯಾಗಿ ಚುನಾವಣೆ ಎದುರಲಿಸಲಿವೆ. ಆದರೆ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಈಗಾಗಲೇ ಕಾಂಗ್ರೆಸ್ ಜತೆ ಜೆಡಿಎಸ್ ಸಮ್ಮಿಶ್ರ ಸರ್ಕಾರ ನಡೆಸುತ್ತಿದೆ. ಈ ಮೈತ್ರಿಯನ್ನು ಲೋಕಸಭೆ ಚುನಾವಣೆಯಲ್ಲೂ ಮುಂದುವರಿಸುವ ಕುರಿತಂತೆ ಚರ್ಚೆ ನಡೆಯಲಿದೆ ಎಂದರು.

      ಬಿಹಾರದಲ್ಲಿ ನಿತೀಶ್‍ಕುಮಾರ್ ಕೂಡ ಆರ್‍ಜೆಡಿ ಮೈತ್ರಿಕೂಟಕ್ಕೆ ಮರಳುವ ಸಾಧ್ಯತೆ ಇದೆ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಏನು ಮಾಡುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ. ಹಾಗಾಗಿ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಕಾಂಗ್ರೆಸ್‍ನಿಂದ ದೂರವಿರಲು ಕೆಲವು ಪ್ರಾದೇಶಿಕ ಪಕ್ಷಗಳು ಮುಂದಾಗುತ್ತಿವೆ. ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದರು.

      ಮೈತ್ರಿ ಸರ್ಕಾರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೌಡರು, ಲೋಕಸಭೆ ಚುನಾವಣೆ ನಂತರ ಮುಂದಿನ ನಡೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ನೋಡಿಕೊಳ್ಳುತ್ತಾರೆ. ಆದರೆ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಭರವಸೆ ನೀಡಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here