‘ಮೈತ್ರಿ’ ಮಂತ್ರಿ ಮಂಡಲ ವಿಸ್ತರಣೆ ಸಾಧ್ಯತೆ

0
169

ಬೆಂಗಳೂರು:

Related image

      ಆಷಾಢದ ನಂತರ ಇದೀಗ ಲೋಕಸಭಾ ಚುನಾವಣಾ ಸಿದ್ಧತೆ ತೀವ್ರಗೊಳ್ಳುತ್ತಿರುವ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಂತ್ರಿಮಂಡಲ ವಿಸ್ತರಣೆ ವಿಳಂಬವಾಗುವ ಸಾಧ್ಯತೆಯಿದೆ.

      ಯಾವುದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಎದುರಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮಂತ್ರಿಮಂಡಲ ವಿಸ್ತರಣೆಗೆ ಕೈ ಹಾಕಿದರೆ ಅಸಮಾಧಾನ ಸ್ಪೋಟಗೊಳ್ಳುವ ಸಂಭವವಿದೆ.

      ಪಕ್ಷದಲ್ಲಿನ ಗುಂಪುಗಾರಿಕೆ, ನಾಯಕರ ನಡುವಿನ ಭಿನ್ನಾಭಿಪ್ರಾಯ, ಉತ್ತರ ಕರ್ನಾಟಕಕ್ಕೆ ಸೂಕ್ತ ಪ್ರಾತಿನಿಧ್ಯೆವಿಲ್ಲ ಎನ್ನುವ ಅಸಮಾಧಾನ ಕೂಡ ಈ ಪ್ರಕ್ರಿಯೆ ಮುಂದಕ್ಕೆ ಹೋಗುವ ಸಾಧ್ಯತೆಯಿದೆ.

      ಆಷಾಢದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಬಹುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಾಲಿಗಿರುವ ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವುದು ಮತ್ತು ಉತ್ತರ ಕರ್ನಾಟಕ ಶಾಸಕರಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಲಾಗಿತ್ತು.

      ಆದರೆ ಏಳೆಂಟು ತಿಂಗಳಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಮಾಡಿದರೆ ಎದುರಾಗಲಿರುವ ಭಿನ್ನಮತ, ಅತೃಪ್ತಿ, ಅಸಮಾಧಾನ ಪಕ್ಷಕ್ಕೆ ಪ್ರತಿಕೂಲ ಪರಿಣಾಮ ಬೀರಬಹುದು. ಹೀಗಾಗಿ ಲೋಕಸಭೆ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಈ ಬಗ್ಗೆ ವರಿಷ್ಠರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

      ಕೆಪಿಸಿಸಿ ಅಧ್ಯಕ್ಷರಾದ ದಿನೇಶ್‍ಗುಂಡೂರಾವ್ ಅವರು ಪಕ್ಷವನ್ನು ಪುನಾರಚಿಸಲು ಮುಂದಾಗಿದ್ದಾರೆ. ಎಲ್ಲಾ ಕಾರ್ಯದರ್ಶಿಗಳು ಸೇರಿದಂತೆ ಜಿಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಬದಲಾವಣೆ ಮಾಡಲು ತಯಾರಿ ನಡೆಸಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here