ರತ್ನಪ್ರಭಾ ಸೇವಾ ಅವಧಿ ಮುಂದುವರಿಸುವುದು ಬೇಡ : ಸಿಎಂ ಪತ್ರ

0
23

ಬೆಂಗಳೂರು :

  ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಸೇವಾ ಅವಧಿ ವಿಸ್ತರಣೆ ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಕೆಲವೇ ದಿನಗಳ ಮುಂಚೆ ಕುಮಾರಸ್ವಾಮಿ ಅವರೇ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಸೇವಾ ಅವಧಿಯನ್ನು ಮೂರು ತಿಂಗಳು ವಿಸ್ತರಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದರು ಆದರೆ ಈಗ ವರಸೆ ಬದಲಿಸಿದ್ದಾರೆ.

      ದೇವೇಗೌಡರ ಅಣತಿಯಂತೆ ಕುಮಾರಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಇತ್ತೀಚೆಗೆ ನಡೆದ ಐಎಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿಯೂ ದೇವೇಗೌಡರ ಪಾತ್ರವಿದೆ ಎನ್ನಲಾಗಿದೆ.

      ಆದರೆ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಮಾಡುವುದಿಲ್ಲ ಎಂದು ದೇವೇಗೌಡರು ಈಗಾಗಲೇ ಹೇಳಿಕೆ ನೀಡಿದ್ದಾರೆ. ರತ್ನಪ್ರಭಾ ಅವರು ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯದ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಆಂಧ್ರಪ್ರದೇಶದ ಮೂಲದವರಾದ ಅವರು ಇದೇ ತಿಂಗಳು 30ನೇ ತಾರೀಖಿನಂದು ನಿವೃತ್ತರಾಗುತ್ತಿದ್ದಾರೆ. 

LEAVE A REPLY

Please enter your comment!
Please enter your name here