ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್

0
21

ಬೆಂಗಳೂರು:

      ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಮಾಡುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗವನ್ನು (ಒಪಿಡಿ) ಬಂದ್ ನಡೆಸಿದ ಮುಷ್ಕರ ಭಾಗಶ: ಯಶಸ್ವಿಯಾಗಿದೆ.

      ಒಪಿಡಿಗಳ ಬಂದ್‍ನಿಂದ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ರೋಗಿಗಳು ಪರದಾಡುತ್ತಿದ್ದು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುವಂತಾಗಿದೆ ರಾಜ್ಯದ ಕೆಲವೆಡೆ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಒಪಿಡಿ ಬಂದ್ ಆಗಿದ್ದರೆ, ಮತ್ತೆ ಕೆಲವೆಡೆ ವೈದ್ಯರು ಕಾರ್ಯ ನಿರ್ವಹಿಸಿರುವುದು ಕಂಡುಬಂದಿದೆ.

      ರಾಜ್ಯದಲ್ಲಿ ಸುಮಾರು ಸಾವಿರ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಚಿಕಿತ್ಸಾಲಯಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಹೊರ ರೋಗಿಗಳ ಸೇವೆಯನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ಡಾ. ಬಿ. ವೀರಣ್ಣ ತಿಳಿಸಿದ್ದಾರೆ.

      ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವ ಮೂಲಕ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಯ ಮೇಲೆ ನಿಯಂತ್ರಣ ಹೇರುವ ಪ್ರಯತ್ನ ನಡೆಸಿದೆ ಇದು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಮಾರಕವಾಗಲಿದೆ ಜತೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳು ಹೆಚ್ಚಾಗಿ ಆರಂಭವಾಗಲಿವೆ. ಮ್ಯಾನೆಜ್‍ಮೆಂಟ್ ಸೀಟುಗಳ ಸಂಖ್ಯೆಯೂ ಹೆಚ್ಚಳವಾಗಲಿದೆ. ಇದರಿಂದ ಬಡ ಮತ್ತು ಹಿಂದುಳಿದ ವರ್ಗಗಳ ಪ್ರತಿಭಾವನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಅವರು ದೂರಿದರು.

      ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಕೇಂದ್ರ ಸರ್ಕಾರದ ನಾಮ ನಿರ್ದೇಶಕ ಸದಸ್ಯರೇ ಇರುತ್ತಾರೆ. ಹಾಗಾಗಿ ಇಡೀ ವೈದ್ಯಕೀಯ ವೃತ್ತಿ ಮತ್ತು ಶಿಕ್ಷಣವನ್ನು ಕೇಂದ್ರ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

      ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ನಡುವೆ ಭಾರತೀಯ ವೈದ್ಯಕೀಯ ಸಂಘದ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಖಾಸಗಿ ಆಸ್ಪತ್ರೆಗಳ ವೈದ್ಯರು ಒಪಿಡಿ ಬಂದ್ ನಡೆಸಿದ್ದರು ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಮಾಮೂಲಿನಂತಿತ್ತು. ವೈದ್ಯರು ಕೆಲಸಕ್ಕೆ ಹಾಜರಾಗಿದ್ದರು. ಒಪಿಡಿ ಸೇರಿದಂತೆ ಎಲ್ಲ ಸೇವೆಗಳು ರೋಗಿಗಳಿಗೆ ಲಭ್ಯವಿದೆ.

      ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಮಾತ್ರ ಬಂದ್ ಆಗಿದ್ದು, ತುರ್ತು ಸೇವೆ ಸೇರಿದಂತೆ ಇತರೆ ಸೇವೆಗಳಿಗೆ ಯಾವುದೇ ತೊಂದರೆಯಾಗಿಲ್ಲ.ಖಾಸಗಿ ಮತ್ತು ಕ್ಲೀನಿಕ್‍ಗಳ ಒಪಿಡಿ ಬಂದ್ ಆಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ ಇಂದು ಹೆಚ್ಚಳವಾಗಿದೆ.ಖಾಸಗಿ ಆಸ್ಪತ್ರೆಗೆ ಒಪಿಡಿ ಬಂದ್ ಬಗ್ಗೆ ಯಾವುದೇ ಮಾಹಿತಿ ಇಲ್ಲದ ರೋಗಿಗಳು ಆಸ್ಪತ್ರೆಗಳಿಗೆ ಬಂದು ಸಂಕಷ್ಟಕ್ಕೆ ಸಿಲುಕಿ ಚಿಕಿತ್ಸೆ ಸಿಗದೆ ಪರದಾಡುವಂತಾಯಿತು.ಭಾರತೀಯ ವೈದ್ಯಕೀಯ ರಾಜ್ಯ ಘಟಕದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯೋಗ ರಚನೆ ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದಿಂದ ಹೊರ ಊರುಗಳಿಂದ ಬಂದಿದ್ದ ರೋಗಿಗಳು ಸರ್ಕಾರಿ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದಾರೆ.

      ಭಾರತೀಯ ವೈದ್ಯಕೀಯ ಸಂಘ ನೀಡಿರುವ ಮುಷ್ಕರ ಕರೆಗೆ ದಾವಣಗೆರೆಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಎಲ್ಲ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಿದೆ ಎಂದು ದಾವಣಗೆರೆ ಜಿಲ್ಲಾ ನರ್ಸಿಂಗ್ ಹೋಂ ಸಂಘದ ಕಾರ್ಯದರ್ಶಿ ಡಾ. ನಾಗಪ್ರಕಾಶ್ ಹೇಳಿದರು.

      ಶಿವಮೊಗ್ಗ, ಬೆಳಗಾವಿ, ಮೈಸೂರು, ತುಮಕೂರು, ಬೀದರ್, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಿದೆ.

 

LEAVE A REPLY

Please enter your comment!
Please enter your name here