ರಾಮನಗರಕ್ಕೆ ಫಿಲಂಸಿಟಿ ಶಿಫ್ಟ್? ಸಿದ್ದು ಅಸಮಧಾನ

0
12

 

ಬೆಂಗಳೂರು;

 

ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಚಿತ್ರನಗರಿಯನ್ನು ರಾಮನಗರಕ್ಕೆ ಸ್ಥಳಾಂತರ ಮಾಡುವುದಾಗಿ ಬಜೆಟ್‍ನಲ್ಲಿ ಪ್ರಕಟಿಸಿರುವ ವಿಷಯವನ್ನು ಮರುಪರಿಶೀಲಿಸಿ, ಚಿತ್ರನಗರಿಯನ್ನು ಮೈಸೂರಿನಲ್ಲಿ ನಿರ್ಮಿಸಲು ಅಗತ್ಯಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಅವರು ಈ ಸಂಬಂಧ ಮುಖ್ಯಮಂತ್ರಿಅವರಿಗೆ ಪತ್ರವೊಂದನ್ನು ಬರೆದು, ಹಿಂದಿನ ಕಾಂಗ್ರೆಸ್ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪಿಸುವ ನಿರ್ಣಯ ಕೈಗೊಂಡು 100 ಎಕರೆ ಜಮೀನು ಮಂಜೂರು ಮಾಡಿತ್ತು. ಅಲ್ಲದೆ, ಬಜೆಟ್‍ನಲ್ಲಿಯೂ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗಿತ್ತು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಎಂಬುದು ಕನ್ನಡ ಚಿತ್ರರಂಗದ ಬಹುವರ್ಷಗಳ ಕನಸು ಮತ್ತು ಬೇಡಿಕೆ, ಹಲವಾರು ಭಾಷೆಗಳ ಚಿತ್ರನಿರ್ಮಾಪಕರು ಚಿತ್ರೀಕರಣಕ್ಕಾಗಿ ಬಹುವಾಗಿ ಇಷ್ಟಪಡುವ ನಗರ ಮೈಸೂರು ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here